ಬೆಂಗಳೂರು: ನಗರದ ಜನನಿಬಿಡ ಪ್ರದೇಶಗಳಲ್ಲಿ ಪರಿಣಾಮಕಾರಿಯಾಗಿ ಕೊರೋನಾ ಪರೀಕ್ಷೆ ನಡೆಸುವಂತೆ ವೈದ್ಯಕೀಯ ಸಿಬ್ಬಂದಿ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಬಿಬಿಎಂಪಿ ಸೂಚಿಸಿದೆ.
ವಾಣಿಜ್ಯ ಪ್ರದೇಶಗಳು, ಮಾರುಕಟ್ಟೆ, ಕೈಗಾರಿಕಾ ಪ್ರದೇಶ, ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ಗಳಲ್ಲಿ ಸೇರಿದಂತೆ ಹೆಚ್ಚು ಜನದಟ್ಟಣೆ ಇರುವ ಎಲ್ಲಾ ಪ್ರದೇಶಗಳಲ್ಲಿಯೂ ಪರಿಣಾಮಕಾರಿಯಾಗಿ ಕೊರೋನಾ ಪರೀಕ್ಷೆ ನಡೆಸಲು ಸೂಚಿಸಿದೆ. ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಕೊರೋನಾ ಹರಡುವ ತೀವ್ರತೆ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ ಹೆಚ್ಚು ಪರೀಕ್ಷೆಗಳನ್ನು ನಡೆಸುವ ಮೂಲಕ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಕೊರೋನಾ ಪರೀಕ್ಷೆಗಳು, ಲಸಿಕೆ ಅಭಿಯಾನವನ್ನು ಈಗಾಗಲೇ ಪರಿಣಾಮಕಾರಿಯಾಗಿ ನಡೆಸಲಾಗುತ್ತಿದೆ. ವಾರ್ಡ್ಗೆ ಸಂಬಂಧಿಸಿದಂತೆ ಪ್ರತಿ ನಿತ್ಯ 400 ಮಂದಿಗೆ ಲಸಿಕೆ ನೀಡುವ ಗುರಿಯನ್ನು ಸಿಬ್ಬಂದಿಗಳಿಗೆ ನೀಡಲಾಗಿದೆ. ವಲಸೆ ಕಾರ್ಮಿಕರು ಹೆಚ್ಚಾಗಿರುವ ಪ್ರದೇಶಗಳಲ್ಲಿ ಲಸಿಕಾ ಅಭಿಯಾನಕ್ಕೆ ಚುರುಕು ನೀಡುವಂತೆಯೂ ಸೂಚಿಸಿರುವುದಾಗಿ ಬಿಬಿಎಂಪಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.