ನವದೆಹಲಿ: ಜರ್ಮನಿಯ ಚಾನ್ಸಲರ್ ಅಂಗೆಲಾ ಮೆರ್ಕೆಲ್ ಮತ್ತು ಪ್ರಧಾನಿ ಮೋದಿ ಅವರು ಅಫ್ಘನಿಸ್ಥಾನದ ಬಿಕ್ಕಟ್ಟು, ನೆರೆ ರಾಷ್ಟ್ರಗಳು, ವಿಶ್ವದ ಮೇಲೆ ಅದು ಬೀರಬಹುದಾದ ಪರಿಣಾಮದ ಬಗ್ಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.
ಅಫ್ಘಾನಿಸ್ಥಾನದ ಇತ್ತೀಚಿನ ಬೆಳವಣಿಗೆಗಳ ಕುರಿತಾಗಿ, ದ್ವಿಪಕ್ಷೀಯ, ಬಹುಪಕ್ಷೀಯ, ಪ್ರಾದೇಶಿಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಭಾರತ ಮತ್ತು ಜರ್ಮನಿಯ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಉಭಯ ದೇಶಗಳ ಬದ್ಧತೆಯನ್ನು ಪುನರುಚ್ಚರಿಸಲಾಗಿರುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.
ಈ ಸಂಬಂಧ ಪ್ರಧಾನಿಗಳ ಕಾರ್ಯಾಲಯವು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಶಾಂತಿ ಮತ್ತು ಭದ್ರತೆಗೆ ಒತ್ತು ನೀಡುವುದು, ಅಫ್ಘಾನ್ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ವಾಪಾಸು ಕರೆಸಿಕೊಳ್ಳುವುದು ಭಾರತ ಸರ್ಕಾರದ ಮೊದಲ ಆದ್ಯತೆ ಎಂದು ತಿಳಿಸಿದೆ. ಹಾಗೆಯೇ ಕೊರೋನಾ ಲಸಿಕೆಗಳ ಸಹಕಾರ, ವ್ಯಾಪಾರ ತಮ್ಮ ಆರ್ಥಿಕ ಸಂಬಂಧಗಳ ಉತ್ತೇಜನ ಸೇರಿದಂತೆ ಇನ್ನೂ ಮಹತ್ವದ ವಿಚಾರಗಳನ್ನು ಈ ಸಂದರ್ಭದಲ್ಲಿ ಉಭಯ ನಾಯಕರು ಚರ್ಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.