ಬೆಂಗಳೂರು: ಸೆಪ್ಟೆಂಬರ್ ತಿಂಗಳಿನಿಂದ ತೊಡಗಿದಂತೆ ರಾಜ್ಯದಲ್ಲಿ ಪ್ರತಿ ನಿತ್ಯ 5 ಲಕ್ಷ ಜನರಿಗೆ ಕೊರೋನಾ ಲಸಿಕೆ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಯೋಜನೆ, ಕಾರ್ಯಕ್ರಮ ಸಂಯೋಜನೆ, ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಕೇಂದ್ರ, ಗಿವ್ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ನಡೆದ ವ್ಯಾಕ್ಸಿನೇಟ್ ಇಂಡಿಯಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಸ್ತುತ ರಾಜ್ಯದಲ್ಲಿ 2.5 ರಿಂದ 4 ಲಕ್ಷ ಜನರಿಗೆ ನಿತ್ಯ ಕೊರೋನಾ ಲಸಿಕೆ ನೀಡಲಾಗುತ್ತಿದೆ. ರಾಜ್ಯಕ್ಕೆ ಹೆಚ್ಚುವರಿ ಲಸಿಕೆ ಒದಗಿಸುವಂತೆಯೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಈ ಕಾರ್ಯಕ್ರಮವನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಬ್ಬರು ಮಹಿಳೆಯರಿಗೆ ಕೊರೋನಾ ಲಸಿಕೆ ನೀಡುವ ಮೂಲಕ ಚಾಲನೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.