ಬೆಂಗಳೂರು: ರಾಜ್ಯದಲ್ಲಿ ಜಲಜೀವನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಪರಿಣಾಮಕಾರಿ ರೀತಿಯಲ್ಲಿ ಜಾರಿಗೊಳಿಸಲು ಅನುಕೂಲವಾಗುವಂತೆ ಯೋಜನೆಯ ಮೇಲ್ವಿಚಾರಣಾ ಸಮಿತಿ ರಚಿಸಲು ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಈ ಯೋಜನೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದರ ಪರಿಣಾಮಕಾರಿ ಮತ್ತು ತ್ವರಿತ ಅನುಷ್ಠಾನ ಮಾಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ. ಹಾಗೆಯೇ ಪ್ರತಿ 15 ದಿನಗಳಿಗೊಮ್ಮೆ ಬಹುಗ್ರಾಮ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಬೇಕು ಎಂದು ಅವರು ತಿಳಿಸಿದ್ದಾರೆ.
ಈ ಯೋಜನೆಯ ಸಮರ್ಪಕ ಜಾರಿಗೆ ಸಂಬಂಧಿಸಿದಂತೆ ತಾವೇ ಖುದ್ದಾಗಿ ಪ್ರತಿ ತಿಂಗಳು ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. ಹಾಗೆಯೇ ಜಲಮೂಲ ಇಲ್ಲದ ಜಿಲ್ಲೆಗಳಿಗೆ ನೀರು ಒದಗಿಸುವುದಕ್ಕೆ ಸಂಬಂಧಿಸಿದಂತೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಜೊತೆಗೆ 2022 – 23 ನೇ ಸಾಲಿಗೆ ಸಂಬಂಧಿಸಿದಂತೆ ಯೋಜನೆ ರೂಪಿಸಿ, ಅನುಮೋದನೆ ನೀಡುವ ಕೆಲಸವನ್ನು ಸಹ ಮಾಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.