ನವದೆಹಲಿ: ಭಾರತದ ಪ್ರಜೆಗಳೆಲ್ಲರಿಗೂ ಕೊರೋನಾ ಲಸಿಕೆ ಒದಗಿಸಿದ ಬಳಿಕ 2022 ರ ವೇಳೆಗೆ ವ್ಯಾಕ್ಸಿನ್ಗಳನ್ನು ವಿದೇಶಗಳಿಗೆ ರಫ್ತು ಮಾಡುವ ಸಾಧ್ಯತೆ ಇದೆ ಎಂದು ತಜ್ಞರ ಸಮಿತಿ ತಿಳಿಸಿದೆ.
ವಿಶ್ವದ 60 ರಾಷ್ಟ್ರಗಳಲ್ಲಿ ಕೊರೋನಾ ಲಸಿಕೆ ಲಭ್ಯವಿಲ್ಲ. ಈ ನಿಟ್ಟಿನಲ್ಲಿ 2022 ರ ವೇಳೆಗೆ ಭಾರತ ತನ್ನ ನಾಗರಿಕರೆಲ್ಲರಿಗೂ ಲಸಿಕೆ ಒದಗಿಸಿ, ಲಸಿಕೆ ದೊರೆಯದ ದೇಶಗಳಿಗೆ ಲಸಿಕೆ ರಫ್ತು ಮಾಡುವಂತಾಗಬೇಕು. ಆ ಪ್ರಮಾಣದ ವ್ಯಾಕ್ಸಿನ್ ನಮ್ಮಲ್ಲಿ ಲಭ್ಯವಿರಬೇಕು ಎಂದು ಸಮಿತಿಯ ಮುಖ್ಯಸ್ಥ ಎನ್. ಕೆ. ಅರೋರ ತಿಳಿಸಿದ್ದಾರೆ.
ವಿಶ್ವದಲ್ಲೇ ಅತೀ ದೊಡ್ಡ ಲಸಿಕಾ ಉದ್ಯಮಕ್ಕೆ ಭಾರತ ಸಾಕ್ಷಿಯಾಗಿದೆ. ಜೊತೆಗೆ ಈ ಬಾರಿ ದೊಡ್ಡ ಪ್ರಮಾಣದಲ್ಲಿ ವಿಶ್ವದ ಬಡ ರಾಷ್ಟ್ರಗಳಿಗೆ ಲಸಿಕೆ ರಫ್ತು ಮಾಡಲಾಗಿದ್ದು, ಈ ನಿಟ್ಟಿನಲ್ಲಿ ಮಹತ್ವದ ನಿರ್ಣಯ ಕೈಗೊಂಡ ಪ್ರಧಾನಿ ಮೋದಿ ಅವರ ನಡೆ ಶ್ಲಾಘನೀಯ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.