ಬೆಂಗಳೂರು: ಕೊರೋನಾ ಮೂರನೇ ಅಲೆಯನ್ನು ಎದುರಿಸಲು ಸಿದ್ಧತೆ ನಡೆಸುತ್ತಿರುವ ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಮಾನವ ಸಂಪನ್ಮೂಲ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿವೆ.
ಈಗಾಗಲೇ ಕೊರೋನಾ ಎರಡು ಅಲೆಗಳ ಸಂದರ್ಭದಲ್ಲಿ ಮಾನವ ಸಂಪನ್ಮೂಲದ ಅಗತ್ಯತೆಯ ಅರಿವಾಗಿದೆ. ಇದರ ಆಧಾರದ ಮೇಲೆ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ಸಹ ಸರ್ಕಾರ ನಡೆಸುತ್ತಿದೆ. ಇದೀಗ ಸಂಭಾವ್ಯ ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಮಾನವ ಸಂಪನ್ಮೂಲಗಳ ಅಗತ್ಯತೆ ಇದ್ದು, ಈ ನಿಟ್ಟಿನಲ್ಲಿ ಕೊರತೆ ನೀಗಿಸಲು ಪೂರಕ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಹಾಗೆಯೇ ಎರಡನೇ ಅಲೆ ಇಳಿಮುಖವಾಗುತ್ತಿರುವ ಸಂದರ್ಭದಲ್ಲಿ ಹಲವು ಖಾಸಗಿ ಆಸ್ಪತ್ರೆಗಳು ಸಹ ಸಿಬ್ಬಂದಿ ಸಂಖ್ಯೆ ಇಳಿಸಿಕೊಂಡಿದ್ದವು. ಆದರೆ ಇದೀಗ ಕೊರೋನಾ ಮೂರನೇ ಅಲೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮತ್ತೆ ಸಿಬ್ಬಂದಿಗಳ ನೇಮಕಾತಿಗೆ ಚಿಂತನೆ ನಡೆಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.