ನವದೆಹಲಿ: ರಾಜ್ಯದಲ್ಲಿ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯನ್ವಯ ಉದ್ದು ಮತ್ತು ಹೆಸರು ಖರೀದಿಗೆ ಕೇಂದ್ರ ಸರ್ಕಾರದ ಕೃಷಿ ಸಚಿವಾಲಯ ಅನುಮೋದಿಸಿದೆ.
ಈ ಯೋಜನೆಯಡಿಯಲ್ಲಿ ಗರಿಷ್ಠ 30 ಸಾವಿರ ಮೆಟ್ರಿಕ್ ಟನ್ ಹೆಸರು, ಹಾಗೆಯೇ ಗರಿಷ್ಠ 10 ಸಾವಿರ ಮೆಟ್ರಿಕ್ ಟನ್ ಉದ್ದು ಖರೀದಿಸಲು ಅನುಮತಿ ನೀಡಲಾಗಿದೆ.
ಈ ಸಂಬಂಧ ಕರ್ನಾಟಕ ಸರ್ಕಾರ ನಿಗದಿ ಮಾಡುವ ದಿನದಿಂದ 90 ದಿನಗಳ ವರೆಗೆ ಈ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಸಚಿವಾಲಯವು ತನ್ನ ಆದೇಶದಲ್ಲಿ ತಿಳಿಸಿದೆ. ಆ ಮೂಲಕ ಉದ್ದು ಮತ್ತು ಹೆಸರು ಬೆಳೆಯುವ ಕೃಷಿಕರಿಗೆ ಸಹಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಅನುಮೋದನೆ ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ʼಕರ್ನಾಟಕದಲ್ಲಿ 2021-22 ರ ಮುಂಗಾರು ಹಂಗಾಮಿಗೆ ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಹೆಸರು ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಸಂತಸ ತಂದಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಕೇಂದ್ರ ಕೃಷಿ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಗರಿಷ್ಠ 30 ಸಾವಿರ ಮೆಟ್ರಿಕ್ ಟನ್ ಹೆಸರು ಹಾಗೂ ಗರಿಷ್ಠ 10 ಸಾವಿರ ಮೆಟ್ರಿಕ್ ಟನ್ ಉದ್ದು ಖರೀದಿಗೆ ಅನುಮತಿ ನೀಡಲಾಗಿದೆ. ಕರ್ನಾಟಕ ಸರ್ಕಾರ ನಿಗದಿ ಪಡಿಸುವ ದಿನಾಂಕದಿಂದ 90 ದಿನಗಳ ಅವಧಿಗೆ ಈ ಖರೀದಿ ಪ್ರಕ್ರಿಯೆ ಜಾರಿಯಲ್ಲಿರುತ್ತದೆ’ ಎಂದಿದ್ದಾರೆ.
“ಕರ್ನಾಟಕದಲ್ಲಿ 2021-22 ರ ಮುಂಗಾರು ಹಂಗಾಮಿಗೆ ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಹೆಸರು ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಸಂತಸ ತಂದಿದೆ. ಇದಕ್ಕಾಗಿ ಪ್ರಧಾನಮಂತ್ರಿ @narendramodi ರವರಿಗೆ, ಕೇಂದ್ರ ಕೃಷಿ ಸಚಿವ @nstomar ಮತ್ತು ಕೇಂದ್ರ ಕೃಷಿ ರಾಜ್ಯ ಸಚಿವೆ @ShobhaBJP ರವರಿಗೆ ಅಭಿನಂದನೆ ಸಲ್ಲಿಸುತ್ತೇನೆ.” (1/2) pic.twitter.com/KXhmQ8fN0n
— CM of Karnataka (@CMofKarnataka) August 25, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.