ನವದೆಹಲಿ: ಕೊರೋನಾ ಸೋಂಕು ದೇಶದಲ್ಲಿ ಅಟೋಮೊಬೈಲ್ ಕ್ಷೇತ್ರದ ಮೇಲೂ ಪರಿಣಾಮ ಬೀರಿದ್ದು, ಈ ವಲಯಕ್ಕೆ ಪುನಶ್ಚೇತನ ನೀಡುವ ನಿಟ್ಟಿನಲ್ಲಿ ವಾಹನಗಳ ಮೇಲಿನ ತೆರಿಗೆ ಇಳಿಕೆಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ದೇಶದಲ್ಲಿ ಕೊರೋನಾ ಸೋಂಕು ಎಲ್ಲಾ ವಲಯಗಳಿಗೆ ಸಂಬಂಧಿಸಿದಂತೆಯೂ ನಕಾರಾತ್ಮಕ ಪರಿಣಾಮ ಬೀರಿದೆ. ಅಟೋಮೊಬೈಲ್ ಕ್ಷೇತ್ರಕ್ಕೆ ಸಂಬಂಧಿಸಿದಂತೆಯೂ ಆರ್ಥಿಕ ಹೊಡೆತ ನೀಡಿದೆ. ಕೊರೋನಾ ಬಳಿಕ ಈ ಕ್ಷೇತ್ರ ದುರ್ಬಲಗೊಂಡಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ತೆರಿಗೆ ಇಳಿಕೆ ಮಾಡುವ ಮೂಲಕ ಹೊಸ ವಾಹನಗಳ ಖರೀದಿಗೆ ಪ್ರೋತ್ಸಾಹ ನೀಡಲಾಗುತ್ತದೆ. ಆ ಮೂಲಕ ಈ ವಲಯದ ಆರ್ಥಿಕತೆಯನ್ನು ಮೇಲೆತ್ತುವ ನಿಟ್ಟಿನಲ್ಲಿ ಸರ್ಕಾರ ಈ ಚಿಂತನೆ ನಡೆಸಿದೆ ಎಂದು ಮೂಲಗಳು ಹೇಳಿವೆ.
ಈ ಬಗ್ಗೆ ಕೇಂದ್ರ ಕಂದಾಯ ಕಾರ್ಯದರ್ಶಿ ತರುಣ್ ಬಜಾಜ್ ಮಾಹಿತಿ ನೀಡಿದ್ದು, ಕೆಲವು ವಲಯಗಳಿಗೆ ತೆರಿಗೆ ಕಡಿತ ಮಾಡುವುದು ಮತ್ತು ಕೆಲವು ಕಾರುಗಳ ಮೇಲಿನ ತೆರಿಗೆ ಕಡಿತ ಮಾಡುವ ಸುಳಿವು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.