ನವದೆಹಲಿ: ದೇಶದಲ್ಲಿ ಗುರುವಾರದವರೆಗೆ ಸುಮಾರು 61 ಕೋಟಿಗೂ ಅಧಿಕ ಕೊರೋನಾ ಲಸಿಕೆಗಳನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದು, ಗುರುವಾರದ ವರೆಗೆ ದೇಶದಲ್ಲಿ 61 ಕೋಟಿಗೂ ಹೆಚ್ಚು ಕೋವಿಡ್ 19 ಲಸಿಕೆಗಳನ್ನು ವಿತರಿಸಲಾಗಿದೆ ಎಂದು ಹೇಳಿದ್ದಾರೆ. 50% ಗಳಷ್ಟು ಅರ್ಹ ನಾಗರಿಕರಿಗೆ ಕೊರೋನಾ ಲಸಿಕೆಯ ಮೊದಲ ಡೋಸ್ ನೀಡುವ ಮೂಲಕ ಭಾರತ ಮಹತ್ವದ ಮೈಲಿಗಲ್ಲು ಸಾಧಿಸಿದೆ ಎಂದು ಅವರು ತಿಳಿಸಿದ್ದಾರೆ. ಹಾಗೆಯೇ ಇದನ್ನು ಹೀಗೆಯೇ ಮುಂದುವರಿಸುತ್ತಾ ನಾವೆಲ್ಲರೂ ಕೊರೋನಾ ವಿರುದ್ಧ ಹೋರಾಡೋಣ ಎಂದು ಆರೋಗ್ಯ ಸಚಿವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
India achieves unprecedented milestone!
5️⃣0️⃣% of the eligible population inoculated with the first dose of #COVID19 vaccine.
Keep it up India 👏
Let us fight Corona 💪🏼 pic.twitter.com/O6ufYrnUnO— Mansukh Mandaviya (@mansukhmandviya) August 26, 2021
ಹಾಗೆಯೇ ಕೇಂದ್ರ ಸರ್ಕಾರ ಕೊರೋನಾ ಲಸಿಕೆ ನೀಡಿಕೆಯ ಪ್ರಗತಿ ಪರಿಶೀಲನೆ ನಡೆಸಿದ್ದು, ಎರಡನೇ ಡೋಸ್ ವ್ಯಾಪ್ತಿಯನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ಶಾಲಾ ಶಿಕ್ಷಕರಿಗೆ ಆದ್ಯತೆ ಮೇರೆಗೆ ಲಸಿಕೆ ಒದಗಿಸುವಂತೆ ಗಮನಹರಿಸಲು ರಾಜ್ಯ. ಸರ್ಕಾರಗಳಿಗೂ ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.