ನವದೆಹಲಿ: ರಾಜ್ಯಕ್ಕೆ ನಿತ್ಯ ಐದು ಲಕ್ಷ ಡೋಸ್ ಕೊರೋನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದನೆ ನೀಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಸ್ತುತ ದಿನಕ್ಕೆ 3.5 ರಿಂದ 4 ಲಕ್ಷ ಲಸಿಕೆಯನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುತ್ತಿದೆ. ಆದರೆ ಈ ಪ್ರಮಾಣವನ್ನು 5 ಲಕ್ಷಕ್ಕೆ ಏರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು ಇದಕ್ಕೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮುಂದಿನ ತಿಂಗಳಿನಿಂದ ದಿನಕ್ಕೆ 5 ಲಕ್ಷ ಲಸಿಕೆಗಳನ್ನು ನೀಡುವ ಗುರಿ ಹೊಂದಲಾಗಿದ್ದು, ಈ ವಿಚಾರವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಗಮನಕ್ಕೆ ತರಲಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ಈ ಪ್ರಸ್ತಾವನೆಗೆ ಅವರು ಒಪ್ಪಿಗೆ ಸೂಚಿಸಿದ್ದು, ಮುಂದಿನ ತಿಂಗಳಿನಿಂದ ದಿನಕ್ಕೆ 5 ಲಕ್ಷ ಲಸಿಕೆ ಒದಗಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಹಾಗೆಯೇ ರಾಜ್ಯದಲ್ಲಿ ಮೆಗಾ ಟೆಕ್ಸ್ಟೈಲ್ಸ್ ಪಾರ್ಕ್ ಸ್ಥಾಪನೆಗೂ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.