ಮಂಗಳೂರು : ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್ಹಾಸ್ಟೆಲ್ ಮಂಗಳೂರು ಇದರ ೧೨ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ನೂತನ ಸಮಿತಿಯ ಅಧ್ಯಕ್ಷರಾಗಿ ಸಿ.ಎ. ಶಾಂತರಾಮ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿದ್ದಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಮಾಲಾಡಿ ಅಜಿತ್ಕುಮಾರ್ ರೈ ತಿಳಿಸಿದ್ದಾರೆ.
ಉಪಾಧ್ಯಕ್ಷರುಗಳಾಗಿ ಬಂಟರ ಯಾನೆ ನಾಡವರ ಮಾತೃ ಸಂಘದ ಪದಾಧಿಕಾರಿಗಳು ಮತ್ತು ಬಂಟರ ಮಾತೃ ಸಂಘ ಮಂಗಳೂರು ತಾಲೂಕು ಸಮಿತಿಯ ಸದಸ್ಯರು ಗಳನ್ನು ಆಯ್ಕೆ ಮಾಡಲಾಗಿದೆ.
ಪ್ರಧಾನ ಕಾರ್ಯದರ್ಶಿಯಾಗಿ ಶಶಿರಾಜ್ ಶೆಟ್ಟಿ ಕೊಳಂಬೆ, ಮೀನಾ ಆರ್. ಶೆಟ್ಟಿ, ಪ್ರತಿಮಾ ಆರ್. ಶೆಟ್ಟಿ , ಕೋಶಾಧಿಕಾರಿಯಾಗಿ ಕೃಷ್ಣರಾಜ ಸುಲಾಯ ಜತೆ ಕೋಶಾಧಿಕಾರಿ ಯಾಗಿ ಶೇಖರ ಶೆಟ್ಟಿ, ಸಂಘಟನಾ ಕಾರ್ಯದರ್ಶಿಗಳಾಗಿ ಮನೀಶ್ ರೈ, ಅಶ್ವತ್ಥಾಮ ಹೆಗ್ಡೆ, ಜಗದೀಶ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ ತಿಂಗಳ 17 ರಿಂದ 19 ರ ವರೆಗೆ 12²ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯ ಕ್ರಮಗಳೊಂದಿಗೆ ಜರಗಲಿದೆ.
ಆಗಸ್ಟ್ 26 ರಂದು ಸಂಜೆ 5 ಗಂಟೆಗೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಎ.ಬಿ. ಶೆಟ್ಟಿ ಸಭಾ ಭವನದಲ್ಲಿ ಸಿದ್ಧಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮಹಾಸಭೆ ಜರಗಲಿದ್ದು ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಕಛೇರಿಯನ್ನು ಉದ್ಘಾಟಿಸಲಾಗುವುದು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾರ್ಯದರ್ಶಿ ದಿವಾಕರ ಸಾಮಾನಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.