ಬೆಂಗಳೂರು: ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯ ಬಿಜೆಪಿಯ ಅಧ್ಯಕ್ಷತೆ ವಹಿಸಿ ಎರಡು ವರ್ಷ ಪೂರೈಸಿದ್ದು, ಅವರ ಅಧಿಕಾರಾವಧಿಯಲ್ಲಿ ಪಕ್ಷ ಮತ್ತಷ್ಟು ಬಲಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಆಡಳಿತದಲ್ಲಿ ಪಕ್ಷ ಬಹಳಷ್ಟು ಸಂಘಟಿತವಾಗಿದೆ ಎಂದು ತಿಳಿಸಿದ್ದಾರೆ. ಕಟೀಲ್ ಅವರು ಇಡೀ ರಾಜ್ಯವನ್ನು ಐದು ಬಾರಿ ಪ್ರವಾಸ ಕೈಗೊಳ್ಳುವ ಮೂಲಕ ಸುತ್ತಿದ್ದಾರೆ. ಸಾಮಾನ್ಯ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಿದ್ದಾರೆ ಎಂದು ಹೇಳಿದ್ದಾರೆ.
ಸರ್ಕಾರ ರಚನೆಗೆ ಸಂಬಂಧಿಸಿದಂತೆಯೂ ನಳಿನ್ ಕುಮಾರ್ ಅವರ ಪಾತ್ರ ಮಹತ್ವದ್ದಾಗಿದೆ. ಮುಂಬರಲಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಬೈ ಎಲೆಕ್ಷನ್ಗಳು ಕಟೀಲ್ ನೇತೃತ್ವದಲ್ಲೇ ನಡೆಯಲಿದೆ. ಮೂರು ಮಹಾನಗರ ಪಾಲಿಕೆಗಳ ಚುನಾವಣೆಯೂ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಹಾರ್ದಿಕ ಅಭಿನಂದನೆಗಳು.
ಮುಂದಿನ ದಿನಗಳಲ್ಲಿ ಪಕ್ಷವು ತಮ್ಮ ನೇತೃತ್ವದಲ್ಲಿ ರಾಜ್ಯದಲ್ಲಿ ಇನ್ನಷ್ಟು ಬಲಗೊಳ್ಳಲಿ, ಸರ್ವ ವ್ಯಾಪಿ ಸರ್ವ ಸ್ಪರ್ಶಿಯಾಗಿ ಬೆಳೆಯಲಿ ಎಂದು ಶುಭ ಹಾರೃಸುತ್ತೇನೆ.@nalinkateel @BJP4Karnataka pic.twitter.com/Jg6WKXJuAQ
— Basavaraj S Bommai (@BSBommai) August 27, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.