ನವದೆಹಲಿ: ಚಲನಚಿತ್ರಗಳು ನಮ್ಮ ಸಮಾಜದ ಪ್ರತಿಬಿಂಬವಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.
ಅವರು ‘ಮೇಕಿಂಗ್ ಆಫ್ ದ ಕಾನ್ಸ್ಟಿಟ್ಯೂಷನ್’ ಮತ್ತು ಫಿಲ್ಮ್ ಪೋಸ್ಟರ್ ಎಕ್ಸಿಬಿಷನ್ ‘ಚಿತ್ರಾಂಜಲಿ @75’ ಕುರಿತಂತೆ ನಡೆದ ವರ್ಚುವಲ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಳೆದ 75 ವರ್ಷಗಳಿಗಿಂತಲೂ ಹಿಂದಿನಿಂದಲೇ ಚಲನಚಿತ್ರಗಳು ತಮ್ಮ ಕೊಡುಗೆಯನ್ನು ಸಮಾಜಕ್ಕೆ ನೀಡುತ್ತಲೇ ಬಂದಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚಿತ್ರಾಂಜಲಿ @75 ವರ್ಚುವಲ್ ಫೋಟೋ ಎಕ್ಸಿಬಿಷನ್ ಅನ್ನು ಡೌನ್ಲೋಡ್ ಮಾಡುವುದಕ್ಕೆ ಅವಕಾಶವಿದೆ. ಈ ಎಕ್ಸಿಬಿಷನ್ನಲ್ಲಿ ಯಾರು ಬೇಕಾದರೂ ಪೋಸ್ಟ್ ಮಾಡಬಹುದು, ಚಿತ್ರಗಳನ್ನು ಹಂಚಿಕೊಳ್ಳಬಹುದು. ಇದು ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಆಗಸ್ಟ್ 23 -29 ರ ವರೆಗಿನ ದಿನಗಳಲ್ಲಿ ಈ ಕಾರ್ಯಕ್ರಮದ ಸಾಂಪ್ರದಾಯಿಕ ವಾರವನ್ನಾಗಿ ಆಚರಣೆ ಮಾಡುತ್ತಿದೆ. ಈ ಸಲುವಾಗಿ ದೇಶದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ವಿವಿಧ ಮಾಧ್ಯಮ ಘಟಕಗಳಿಂದ ದೇಶಾದ್ಯಂತ ವಿವಿಧ ಚಟುವಟಿಕೆಗಳು ಮತ್ತು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ವಿವಿಧ ರಾಜ್ಯಗಳಲ್ಲಿಯೂ ಈ ಸಂಬಂಧ ಹಲವು ಕಾರ್ಯಕ್ರಮಗಳು ನಡೆಯಲಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
Picture Perfect ! 🎥
An Iconic Film Poster montage of 75 Iconic Films
Chitranjali @ 75 a Platinum PanoramaClick, Download, Print & Frame 👇🏼https://t.co/WEQF2tkQJT
• @MIB_India Celebrates #AmritMahotsav pic.twitter.com/sAgsZ5iOo1
— Anurag Thakur (@ianuragthakur) August 27, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.