ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಿದ ಎರಡನೇ ರಾಜ್ಯ ಎಂಬ ಖ್ಯಾತಿಗೆ ಮಧ್ಯಪ್ರದೇಶ ಪಾತ್ರವಾಗಿದೆ.
ಮಧ್ಯಪ್ರದೇಶದ ಉನ್ನತ ಶಿಕ್ಷಣ ಸಚಿವ ಡಾ. ಮೋಹನ್ ಯಾದವ್ ಅವರು ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು, ಸಂಶೋಧನಾ ವಿದ್ವಾಂಸರು ಭೋಪಾಲ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಬಗ್ಗೆ ಮಾತನಾಡಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯದ ರಾಜ್ಯಪಾಲ ಮಂಗೂಭಾಯ್ ಪಟೇಲ್ ಅವರು ಮಾತನಾಡಿ, ರಾಜ್ಯದ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಬದುಕು ರೂಪಿಸುವುದಕ್ಕೆ ಪೂರಕ ಶಿಕ್ಷಣ ನೀಡಬೇಕು. ಇದರಿಔದ ಅವರು ಜೀವನದಲ್ಲಿ ಎತ್ತರಕ್ಕೇರಲು ಸಾಧ್ಯ. ಶಿಕ್ಷಣ ಮತ್ತು ಕೌಶಲದ ಉತ್ತೇಜನದಿಂದ ಹೊಸ ಪೀಳಿಗೆಯ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು, ವಿದ್ಯಾರ್ಥಿಗಳ ಬದುಕನ್ನು ರೂಪಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನುಕೂಲ ಒದಗಿಸಲಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕದ್ದಾಗಿದ್ದು, ಎರಡನೇ ಸ್ಥಾನವನ್ನು ಮಧ್ಯಪ್ರದೇಶ ತನ್ನದಾಗಿಸಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.