ಬೆಂಗಳೂರು: ರಾಜ್ಯದಲ್ಲಿ ವಿಮಾನಯಾನ ಮೂಲಸೌಕರ್ಯ ಬಲಪಡಿಸುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕದಲ್ಲಿ ವಿಮಾನಯಾನ ಮೂಲಸೌಕರ್ಯಗಳನ್ನು ಬಲಪಡಿಸಲು ಯೋಜನೆಗಳನ್ನು ತ್ವರಿತಗೊಳಿಸುವಂತೆ ಸಚಿವರು ಪತ್ರದ ಮೂಲಕ ಮನವಿ ಮಾಡಿದ್ದಾರೆ. ಸಿಂಧಿಯಾ ಅವರು ಬೆಳಗಾವಿ, ಮೈಸೂರು, ಶಿವಮೊಗ್ಗ, ವಿಜಯಪುರ ವಿಮಾನ ನಿಲ್ದಾಣಗಳಿಗೆ ಸಂಬಂಧಿಸಿದಂತೆ ಸಿಎಂ ಅವರ ಗಮನ ಸೆಳೆದಿದ್ದಾರೆ.
ಈ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ಪ್ರಕಟಣೆಯನ್ನು ಹೊರಡಿಸಿದ್ದು, ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಎಎಐ 370 ಎಕರೆ ಭೂಮಿ ಅಗತ್ಯ ಇದ್ದು, ಅದರಲ್ಲಿ 348.6 ಎಕರೆ ಭೂಮಿ ಹಸ್ತಾಂತರವಾಗಿದೆ. ಮೈಸೂರಿನಲ್ಲಿ ಎಎಐ 240 ಎಕರೆಗಳನ್ನು ಮಂಜೂರು ಮಾಡಲು ವಿನಂತಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.