ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆಯುತ್ತಿರುವ ಲಸಿಕಾ ಅಭಿಯಾನ ದಾಖಲೆಯ ಪ್ರಮಾಣದಲ್ಲಿ ಜನರಿಗೆ ಲಸಿಕೆ ನೀಡುವ ಕೆಲಸ ಮಾಡುತ್ತಿದೆ.
ಈಗಾಗಲೇ ದೇಶದ 50% ಜನರಿಗೆ ಮೊದಲ ಡೋಸ್ ಲಸಿಕೆ ವಿತರಿಸಿರುವ ಕೇಂದ್ರ ಸರ್ಕಾರದ ಲಸಿಕಾ ಅಭಿಯಾನ ಶುಕ್ರವಾರ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಶುಕ್ರವಾರ ಒಂದೇ ದಿನದಲ್ಲಿ 1 ಕೋಟಿ ಡೋಸ್ ಲಸಿಕೆಗಳನ್ನು ನೀಡುವ ಮೂಲಕ ದಾಖಲೆ ಬರೆದಿದೆ. ವ್ಯಾಕ್ಸಿನೇಷನ್ ಪ್ರಾರಂಭವಾದಂದಿನಿಂದ ಅತೀ ದೊಡ್ಡ ಮಟ್ಟದಲ್ಲಿ ಒಂದೇ ದಿನದಲ್ಲಿ ನಡೆದ ವ್ಯಾಕ್ಸಿನೇಷನ್ ಇದಾಗಿದೆ.
ದೇಶದ ಈ ಮಹತ್ವದ ಸಾಧನೆಗೆ ಪ್ರಧಾನಿ ಮೋದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ದಾಖಲೆ ಮಟ್ಟದ ವ್ಯಾಕ್ಸಿನೇಷನ್ ಇಂದು ಆಗಿದೆ. 1 ಕೋಟಿ ಲಸಿಕೆ ದಾಟಿರುವುದು ಮಹತ್ವದ ಸಾಧನೆ. ಲಸಿಕೆ ಹಾಕಿಸಿಕೊಂಡವರಿಗೆ ಮತ್ತು ಲಸಿಕೆ ಹಾಕುವ ಅಭಿಯಾನದಲ್ಲಿ ಪಾಲ್ಗೊಂಡವರಿಗೆ ಅಭಿನಂದನೆಗಳುʼ ಎಂದಿದ್ದಾರೆ.
Record vaccination numbers today!
Crossing 1 crore is a momentous feat. Kudos to those getting vaccinated and those making the vaccination drive a success.
— Narendra Modi (@narendramodi) August 27, 2021
ಹಾಗೆಯೇ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಲಸಿಕೆ ನೀಡಲು ಆರಂಭಿಸಿದ ಬಳಿಕ ಈವರೆಗೆ ಸುಮಾರು 62 ಕೋಟಿ ಲಸಿಕೀಕರಣ ನಡೆದಿದೆ. ಈ ಮಾಹಿತಿಯನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಹಂಚಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.