ನವದೆಹಲಿ: ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಜನ್ ಧನ್ ಯೋಜನೆಗೆ ಏಳು ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಇಂದು ಪಿಎಂ ಜನ್ ಧನ್ ಯೋಜನೆಯ ಏಳನೇ ವರ್ಷವನ್ನು ಆಚರಣೆ ಮಾಡುತ್ತಿದ್ದೇವೆ. ಈ ಯೋಜನೆ ದೇಶದ ಅಭಿವೃದ್ಧಿಯ ಪಥವನ್ನು ಬದಲಾವಣೆ ಮಾಡಿದೆ. ಇದು ಹಣಕಾಸಿನ ಸೇರ್ಪಡೆ, ಘನತೆಯ ಜೀವನ ಹಾಗೂ ಅಸಂಖ್ಯಾತ ಭಾರತೀಯರ ಸಬಲೀಕರಣವನ್ನು ಖಾತ್ರಿಪಡಿಸಿದೆ. ಈ ಯೋಜನೆಯು ಮತ್ತಷ್ಟು ಪಾರದರ್ಶಕತೆಗೆ ಸಹಾಯ ಮಾಡಿದೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಪಿಎಂ ಜನ್ ಧನ್ ಯೋಜನೆಯನ್ನು ಯಶಸ್ವಿಯಾಗಿಸಲು ಶ್ರಮಿಸಿದ ಎಲ್ಲರ ಅವಿರತ ಶ್ರಮವನ್ನು ನಾನು ಶ್ಲಾಘಿಸುತ್ತೇನೆ. ಅವರ ಈ ಪ್ರಯತ್ನಗಳಿಂದ ಭಾರತದ ಜನರು ಉತ್ತಮ ಗುಣಮಟ್ಟದ ಜೀವನ ನಡೆಸುವಂತಾಗಿದೆ ಎಂದು ಅವರು ಹೇಳಿದ್ದಾರೆ.
ಸಾಮಾನ್ಯ ಜನರು ಸಹ ಬ್ಯಾಂಕ್ ಖಾತೆ ಹೊಂದುವಂತೆ ಮಾಡುವ ಉದ್ದೇಶದಿಂದ ಏಳು ವರ್ಷಗಳ ಹಿಂದೆ ಪಿಎಂ ಜನ್ ಧನ್ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಇದೀಗ ಈ ಯೋಜನೆ ಯಶಸ್ವಿಯಾಗಿ ಏಳು ವರ್ಷಗಳನ್ನು ಪೂರೈಸಿದ್ದು, ಕಳೆದ ಏಳು ವರ್ಷಗಳಿಂದ ಹಲವು ಫಲಾನುಭವಿಗಳಿಗೆ ಈ ಯೋಜನೆ ಅನುಕೂಲ ಒದಗಿಸಿಕೊಟ್ಟಿದೆ.
Today we mark seven years of #PMJanDhan, an initiative that has forever transformed India’s development trajectory. It has ensured financial inclusion and a life of dignity as well as empowerment for countless Indians. Jan Dhan Yojana has also helped further transparency.
— Narendra Modi (@narendramodi) August 28, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.