ನವದೆಹಲಿ: ದೇಶದಲ್ಲಿ ಹಬ್ಬಗಳ ಸಾಲು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ತಿಳಿಸಿದೆ.
ಈ ಸಂಬಂಧ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಪತ್ರ ಬರೆದಿದ್ದು, ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಯಾವುದೇ ರೀತಿಯ ದೊಡ್ಡ ಮಟ್ಟದ ಕೂಟಗಳಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು, ಹಾಗೆಯೇ ಅಗತ್ಯ ಬಿದ್ದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಸ್ಥಳೀಯ ನಿರ್ಬಂಧಗಳನ್ನು ಹೇರುವಂತೆ ಸೂಚಿಸಿದ್ದಾರೆ.
ಜೊತೆಗೆ ಪ್ರಸ್ತುತ ಇರುವ ಕೊರೋನಾ ಮಾರ್ಗಸೂಚಿಗಳನ್ನು ಇನ್ನೂ ಒಂದು ತಿಂಗಳುಗಳ ವರೆಗೆ ವಿಸ್ತರಣೆ ಮಾಡುವಂತೆಯೂ ಅವರು ತಿಳಿಸಿದ್ದಾರೆ. ದೇಶದ ಕೆಲ ರಾಜ್ಯಗಳಲ್ಲಿ ಕೊರೋನಾ ಪರಿಸ್ಥಿತಿ ಕಳವಳಕಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ನಿಯಂತ್ರಣಕ್ಕಾಗಿ ಸಕ್ರಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆಯೂ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಸಂಭಾವ್ಯ ಸೋಂಕು ಹೆಚ್ಚಳದ ಚಿಹ್ನೆಗಳನ್ನು ಆರಂಭದಲ್ಲಿಯೇ ಗುರುತಿಸಿಕೊಳ್ಳುವುದು, ಅವುಗಳು ಹೆಚ್ಚು ವ್ಯಾಪಿಸುವುದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಭಲ್ಲಾ ತಿಳಿಸಿದ್ದಾರೆ. ಹಬ್ಬಗಳ ಸಂದರ್ಭದಲ್ಲಿ ಹೆಚ್ಚು ಎಚ್ಚರಿಕೆ ವಹಿಸುವಂತೆಯೂ ಅವರು ಸೂಚಿಸಿದ್ದಾರೆ. ಜನನಿಬಿಡ ಸ್ಥಳಗಳಲ್ಲಿ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು. ಟೆಸ್ಟ್, ಟ್ರ್ಯಾಕ್, ಟ್ರೀಟ್,ವ್ಯಾಕ್ಸಿನೇಷನ್, ಕೊರೋನಾ ನಡಾವಳಿಗಳ ಸೂಕ್ತ ಅಳವಡಿಕೆಯ ಬಗೆಗೂ ಗಮನ ಹರಿಸಲು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.