ಟೊಕಿಯೋ: ಜಪಾನ್ನ ಟೊಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತದ ಮುಡಿಗೆ ಐದನೇ ಪದಕದ ಗರಿ ಮೂಡಿದೆ.
ಡಿಸ್ಕಸ್ ಥ್ರೋ ಪಂದ್ಯದಲ್ಲಿ ಭಾರತದ ಡಿಸ್ಕಸ್ ಥ್ರೋ ಆಟಗಾರ ಯೋಗೇಶ್ ಕಥುನಿಯಾ ಅವರು ಬೆಳ್ಳಿ ಪದಕವನ್ನು ಗೆದ್ದು ಕೊಟ್ಟಿದ್ದಾರೆ.
ನಿನ್ನೆ ಮುಂಜಾನೆ ಭಾರತೀಯ ಟೇಬಲ್ ಟೆನ್ನಿಸ್ ಆಟಗಾರ್ತಿ ಭವಿನಾ ಪಟೇಲ್ ಮತ್ತು ಸಂಜೆ ಭಾರತೀಯ ಹೈಜಂಪ್ ಆಟಗಾರ ನಿಶದ್ ಕುಮಾರ್ ಅವರು ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ದೇಶದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದರು. ಸಂಜೆ ಡಿಸ್ಕಸ್ ಥ್ರೋ ಪಂದ್ಯದಲ್ಲಿ ವಿನೋದ್ ಕುಮಾರ್ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಹಿರಿಮೆಗೆ ತಮ್ಮ ಕೊಡುಗೆ ನೀಡಿದ್ದರು.
ಇಂದು ಬೆಳಗ್ಗೆ ಶೂಟಿಂಗ್ನಲ್ಲಿ ಭಾರತದ ಅವನಿ ಲೇಖರ ಅವರು ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಬಂಗಾರ ಗೆಲ್ಲುವ ಕನಸನ್ನು ನನಸಾಗಿಸಿದ್ದರು. ಅದರ ಬೆನ್ನಲ್ಲೇ ಭಾರತೀಯ ಡಿಸ್ಕಸ್ ಎಸೆತಗಾರ ಯೋಗೇಶ್ ಅವರು ಬೆಳ್ಳಿ ಪದಕಕ್ಕೆ ಮುತ್ತಿಟ್ಟು ದೇಶದ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.