ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು ಉಗ್ರನೋರ್ವನನ್ನು ಭಾರತೀಯ ಭದ್ರತಾ ಪಡೆಯ ಯೋಧರು ಸಂಹರಿಸಿದ್ದಾರೆ.
ಪೂಂಚ್ನ ಗಡಿ ನಿಯಂತ್ರಣ ರೇಖೆಯ ಬಳಿ ಉಗ್ರರು ದೇಶದೊಳಕ್ಕೆ ನುಸುಳುತ್ತಿದ್ದು, ಈ ಸಂದರ್ಭದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಉಗ್ರನ ಸಂಹಾರವಾಗಿದೆ. ಈ ಪ್ರದೇಶದಲ್ಲಿ ಮತ್ತಷ್ಟು ಕಾರ್ಯಾಚರಣೆಯನ್ನು ಅಧಿಕಾರಿಗಳು ನಡೆಸಿದ್ದಾರೆ ಎಂದು ಭಾರತದ ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಎಲ್ಒಸಿ ಬಳಿಯಲ್ಲಿ ದೇಶಕ್ಕೆ ನುಸುಳುತ್ತಿದ್ದವರಿಗೆ ಅಲ್ಲಿಂದ ಹಿಂದಿರುಗುವಂತೆ ಭದ್ರತಾ ಪಡೆಗಳು ಎಚ್ಚರಿಕೆ ನೀಡಿದರೂ, ಉಗ್ರರು ತಮ್ಮ ಕುಕೃತ್ಯವನ್ನು ಮುಂದುವರಿಸಿದ್ದಾರೆ. ಈ ಸಂದರ್ಭದಲ್ಲಿ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಅಟ್ಟಹಾಸ ಏರ್ಪಟ್ಟಿದೆ. ಈ ವೇಳೆ ಓರ್ವ ಉಗ್ರನ ಸಂಹಾರವಾಗಿದೆ. ಸ್ಥಳದಲ್ಲಿ ಎಕೆ – 47 ಬಂದೂಕು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.