ಟೋಕಿಯೋ: ಜಪಾನ್ನ ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ನಲ್ಲಿ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ಸುಮಿತ್ ಅಂಟಿಲ್ ಅವರು ಚಿನ್ನದ ಪದಕ ಗಳಿಸಿ, ದೇಶದ ಹಿರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಏರಿಸಿದ್ದಾರೆ.
68.55 ಮೀ. ದೂರ ಜಾವೆಲಿನ್ ಎಸೆಯುವ ಮೂಲಕ ಐತಿಹಾಸಿಕ ಸಾಧನೆಯನ್ನು ಈ ಪ್ಯಾರಾಲಿಂಪಿಕ್ಸ್ನಲ್ಲಿ ಸುಮಿತ್ ದಾಖಲಿಸಿದ್ದಾರೆ. ಆ ಮೂಲಕ ಈ ಹಿಂದಿನ ತಮ್ಮದೇ ದಾಖಲೆಯನ್ನು ಅವರು ಮುರಿದಿದ್ದಾರೆ.
ಸುಮಿತ್ ಅವರು ಚಿನ್ನ ಗೆಲ್ಲುವ ಮೂಲಕ ಭಾರತಕ್ಕೆ ಈ ಪ್ಯಾರಾಲಿಂಪಿಕ್ಸ್ನಲ್ಲಿ ಎರಡು ಚಿನ್ನದ ಪದಕಗಳು ದೊರೆತಿವೆ. ಇಂದು ಒಟ್ಟಾಗಿ ಭಾರತಕ್ಕೆ ಒಟ್ಟು ಐದು ಪದಕಗಳು ಲಭಿಸಿದಂತಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.