ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲಿಂಗ ಸಮಾನತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ಇದಕ್ಕೆ ಪೂರಕ ಎಂಬಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಟ್ವೀಟ್ ಒಂದನ್ನು ಹಂಚಿಕೊಂಡಿದ್ದಾರೆ.
ಅವರು ತಮ್ಮ ಟ್ವೀಟ್ನಲ್ಲಿ ದೇಶದ ಮೊದಲ ಗಣಿಗಾರಿಕಾ ಮಹಿಳಾ ಎಂಜಿನಿಯರ್ ಆಕಾಂಕ್ಷಾ ಕುಮಾರಿ ಅವರ ಚಿತ್ರವನ್ನು ಹಂಚಿಕೊಂಡು, ಇದು ಪ್ರಧಾನಿ ಮೋದಿ ಅವರ ಪ್ರಗತಿಪರ ಆಡಳಿತ. ಲಿಂಗ ಸಮಾನತೆಯನ್ನು ಉತ್ತೇಜಿಸಲು ಮತ್ತು ಹೆಚ್ಚಿನ ಅವಕಾಶಗಳ ಸೃಷ್ಟಿಗೆ ಪ್ರಧಾನಿ ಮೋದಿ ಅವರ ಸರ್ಕಾರ ಶ್ರಮಿಸುತ್ತಿದೆ.
ಪ್ರಧಾನಿ ಮೋದಿ ಅವರು ಭೂಗತ ಗಣಿಗಾರಿಕಾ ವಲಯದಲ್ಲಿ ಕಾರ್ಯ ನಿರ್ವಹಿಸಲು ಮಹಿಳೆಯರಿಗೂ ಅವಕಾಶ ನೀಡಿದ್ದಾರೆ. ಅದಕ್ಕೆ ಪೂರಕ ಎಂಬಂತೆ ಆಕಾಂಕ್ಷಾ ಕುಮಾರಿ ಅವರು ದೇಶದ ಗಣಿಗಾರಿಕಾ ವಲಯದಲ್ಲಿ ಕೆಲಸ ಮಾಡುತ್ತಿರುವ ಮೊದಲ ಮಹಿಳಾ ಎಂಜಿನಿಯರ್ ಆಗಿದ್ದಾರೆ ಎಂದು ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
Progressive Governance: To promote gender equality & generate more opportunities, Govt under PM @narendramodi ji allowed women to work in underground coal mines.
Ms Akanksha Kumari becomes the 1st woman mining engineer in @CoalIndiaHQ to work in an underground mine.@smritiirani pic.twitter.com/M58KQP1JCB
— Pralhad Joshi (@JoshiPralhad) August 31, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.