ಬೆಂಗಳೂರು: ಸೆ. 13 ರಿಂದ ನಡೆಯಲಿರುವ ವಿಧಾನಸಭಾ ಅಧಿವೇಶನದ ಕಲಾಪಗಳಲ್ಲಿ ಎಲ್ಲಾ ಸಚಿವರು ಹಾಜರಿರುವಂತೆ ಸೂಚನೆ ನೀಡಬೇಕು ಎಂದು ಮುಖ್ಯಮಂತ್ರಿಗಳು, ಸಂಸದೀಯ ವ್ಯವಹಾರಗಳ ಸಚಿವರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸ್ಪೀಕರ್ ಪತ್ರ ಬರೆದಿದ್ದು, ಅಧಿವೇಶನದಲ್ಲಿ ಭಾಗವಹಿಸುವಂತೆ ಎಲ್ಲಾ ಸಚಿವರಿಗೂ ಅಗತ್ಯ ಸೂಚನೆಗಳನ್ನು ನೀಡಬೇಕಿದೆ. ತಾವು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಸಚಿವರು ಕಲಾಪದಲ್ಲಿ ಹಾಜರಾಗುವ ಸಂಬಂಧ ವಿನಾಯಿತಿ ಕೋರುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಹಾಜರಿರುವೂ ಅವರು ಸೂಚಿಸಲು ಪತ್ರದಲ್ಲಿ ತಿಳಿಸಿದ್ದಾರೆ.
ಹಲವು ಮಹತ್ವದ ವಿಚಾರಗಳಿಗೆ ಸಂಬಂಧಿಸಿದಂತೆ ಕೇಳಲಾಗುವ ಪ್ರಶ್ನೆಗಳಿಗೆ ಆಯಾಯ ಸಚಿವರು ಉತ್ತರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಸಚಿವರುಗಳ ಗೈರು ಸರಿಯಲ್ಲ. ಸಚಿವರ ಅನುಪಸ್ಥಿತಿ ಆಡಳಿತ ಪಕ್ಷದಿಂದ ಉತ್ತರ ಪಡೆಯುವ ಸದಸ್ಯರ ಅವಕಾಶವನ್ನು ವಂಚಿಸಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಸದನದಲ್ಲಿ ಸಚಿವರ ಹಾಜರಾತಿ ಖಾತ್ರಿಪಡಿಸಬೇಕು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.