ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗಿದ್ದು, ಈ ಬಗ್ಗೆ ಗುಪ್ತಚರ ಮಾಹಿತಿಗಳು ಲಭಿಸಿದ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜೊತೆಗೆ ಮಾತನಾಡಿದ ಅವರು, ರಾಜ್ಯದ ಕರಾವಳಿ ಭಾಗ ಮತ್ತು ಅರಣ್ಯ ಪ್ರದೇಶಗಳಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ಚಟುವಟಿಕೆಗಳು ನಡೆಯದಂತೆ ಎಚ್ಚರಿಕೆಯನ್ನು ರಾಜ್ಯದ ಆಡಳಿತ ಕಟ್ಟುನಿಟ್ಟಾಗಿ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಕೆಲವು ವಿಚಾರಗಳ ಬಗ್ಗೆ ಬಹಿರಂಗವಾಗಿ ಮಾತನಾಡುವಂತೆ ಇಲ್ಲ. ಆದರೆ ಈ ಸಂಬಂಧ ಕರ್ನಾಟಕ ಪೊಲೀಸರು, ಎನ್ಐಎ ಜೊತೆಗೆ ಕರಾವಳಿ ಮತ್ತು ಸಮೀಪದ ಅರಣ್ಯ ಪ್ರದೇಶಗಳಲ್ಲಿ ನಡೆಯುವ ದೇಶ ವಿರೋಧಿ ಚಟುವಟಿಕೆಗಳ ಮೇಲೆ ನಿಗಾ ಇರಿಸುವಂತೆ ಸೂಚಿಸಲಾಗಿದೆ. ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗವಹಿಸಿದ್ದ ವ್ಯಕ್ತಿಯನ್ನು ಈ ಹಿಂದೆ ಎನ್ಐಎ ಬಂಧಿಸಿತ್ತು. ಮುಂದಿನ ದಿನಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ಕರಾವಳಿ ಭಾಗದಲ್ಲಿ ನಡೆಯದಂತೆ ಹೆಚ್ಚು ಎಚ್ಚರಿಕೆ ವಹಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.