ಬೆಂಗಳೂರು: ಕೈಗಾರಿಕಾ ಪ್ರದೇಶಗಳಲ್ಲಿ ವಿಶ್ವದರ್ಜೆಯ ಮೂಲಸೌಕರ್ಯ ಗಳನ್ನು ಒದಗಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
ಇಂದು ದಿನವಿಡೀ ಬೆಂಗಳೂರಿನ ಕೈಗಾರಿಕಾ ಪ್ರದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಗಳನ್ನು ಅವರು ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ಕೈಗಾರಿಕಾ ಪ್ರದೇಶಗಳಲ್ಲಿ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು. ರಸ್ತೆ, ವಿದ್ಯುತ್, ನೀರಿನ ಸಂಪರ್ಕ, ಚರಂಡಿ ವ್ಯವಸ್ಥೆ ಮೊದಲಾದ ಅನುಕೂಲಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಕೈಗಾರಿಕಾ ವಲಯಗಳಲ್ಲಿ ಮೂಲಸೌಕರ್ಯಗಳ ಕೊರತೆ ಎದುರಾದರೆ ಸಂಬಂಧಿಸಿದಂತೆ ಇರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸಹ ಅವರು ನೀಡಿದ್ದಾರೆ. ಕರ್ನಾಟಕವನ್ನು ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ನಂ. 1 ಮಾಡುವ ಗುರಿ ಇದ್ದು, ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿಕೊಂಡು ಕೈಗಾರಿಕಾ ಕ್ರಾಂತಿ ಮಾಡಬೇಕು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.