ಬೆಂಗಳೂರು: ಕೊರೋನಾ ಮೂರನೇ ಅಲೆಯ ಭೀತಿ ರಾಜ್ಯದಲ್ಲಿ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ ವಿದೇಶದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಆರ್ಟಿಪಿಸಿಆರ್ ವರದಿಯನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ವಿದೇಶದಿಂದ ಆಗಮಿಸುವವರ ಮೇಲೆಯೂ ನಿಗಾ ವಹಿಸುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ವಿದೇಶದಿಂದ ಆಗಮಿಸುತ್ತಿರುವ ಕೆಲವರಲ್ಲಿ SARS – COV – 2 ಪ್ರಕರಣಗಳು ಪತ್ತೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಲವು ಆಯ್ದ ದೇಶಗಳಿಂದ ಆಗಮಿಸುವವರಿಗೆ ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಈಗಾಗಲೇ ಈ ಪರೀಕ್ಷಾ ವರದಿ ಕಡ್ಡಾಯಗೊಳಿಸಲಾಗಿದೆ.
ಬಾಂಗ್ಲಾದೇಶ, ಚೀನಾ, ಮಾರಿಷಸ್, ನ್ಯೂಜಿಲೆಂಡ್, ಜಿಂಬಾಬ್ವೆ ಮೊದಲಾದ ರಾಷ್ಟ್ರಗಳಿಂದ ಆಗಮಿಸುವ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಈ ಮೊದಲು ಯು.ಕೆ., ಯುರೋಪ್, ದ. ಆಫ್ರಿಕಾ, ಬ್ರೆಜಿಲ್ನಿಂದ ಬರುವವರಿಗಷ್ಟೇ ಆರ್ಟಿಪಿಸಿಆರ್ ವರದಿಯನ್ನು ಕಡ್ಡಾಯಗೊಳಿಸಲಾಗಿತ್ತು. ಇದೀಗ ವಿದೇಶದಿಂದ ಆಗಮಿಸುವ ಎಲ್ಲರೂ ಆರ್ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಸರ್ಕಾರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.