ಬೆಂಗಳೂರು: ರಾಜ್ಯದಲ್ಲಿ ಪ್ರತಿ ಬುಧವಾರ ಲಸಿಕೋತ್ಸವ ನಡೆಸುವುದಾಗಿ ಕೆಲ ದಿನಗಳ ಹಿಂದಷ್ಟೇ ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದು, ಅದರಂತೆ ನಿನ್ನೆಯಷ್ಟೇ ಮೊದಲ ಬುಧವಾರದ ಲಸಿಕಾ ಉತ್ಸವ ನಡೆದಿದೆ.
ನಿನ್ನೆ ಇಡಿ ರಾಜ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 11.80 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. ಆ ಮೂಲಕ ಈ ಉತ್ಸವಕ್ಕೆ ದೊಡ್ಡ ಮಟ್ಟದ ಉತ್ತೇಜನ ದೊರಕಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಸುಮಾರು 1.84 ಲಕ್ಷ ಜನರು ಲಸಿಕೆ ಪಡೆದಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಹಾಗೆಯೇ ಬುಧವಾರ ದೇಶದಲ್ಲಿ 78 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ. ಇನ್ನು ಇಡೀ ದೇಶಕ್ಕೆ ಸಂಬಂಧಿಸಿದಂತೆ ಲಸಿಕೆ ವಿತರಣೆಯಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ. ನಿನ್ನೆ ರಾತ್ರಿ 9 ಗಂಟೆಯ ವರೆಗೆ ಲಸಿಕೆ ನೀಡಿಕೆ ನಡೆದಿದ್ದು, ಒಂದೇ ದಿನದಲ್ಲಿ 11.80 ಲಕ್ಷ ಜನರಿಗೆ ಲಸಿಕೆ ನೀಡುವ ಮೂಲಕ ರಾಜ್ಯ ಸಾಧನೆ ಮೆರೆದಿದೆ.
Karnataka crosses 1️⃣0️⃣ lakh doses today! Pace is picking up and we have given more than 3️⃣5️⃣ lakh doses in the last 5️⃣ days! @CMofKarnataka@mansukhmandviya @narendramodi #Karnataka #COVID19
— Dr Sudhakar K (@mla_sudhakar) September 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.