ಅಲಹಾಬಾದ್: ಗೋವು ಭಾರತದ ಸಂಸ್ಕೃತಿಯ ಭಾಗವಾಗಿದ್ದು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ತಿಳಿಸಿದೆ.
ಗೋ ಕಳ್ಳತನ, ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣವೊಂದನ್ನು ವಿಚಾರಣೆ ನಡೆಸಿದ ಕೋರ್ಟ್, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ, ಗೋ ಹತ್ಯೆ ಮಾಡುವವರನ್ನು ಶಿಕ್ಷಿಸುವ ನಿಟ್ಟಿನಲ್ಲಿ ಸಂಸತ್ತು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಹಾಗೆಯೇ ಈ ಸಂಬಂಧ ಬಂಧಿತನಾಗಿದ್ದ ಆರೋಪಿಗೆ ಜಾಮೀನು ನಿರಾಕರಣೆ ಮಾಡಿದೆ.
ಹಾಗೆಯೇ ಗೋವು ಭಾರತೀಯ ಸಂಸ್ಕೃತಿಯ ಭಾಗ. ಗೋ ಮಾಂಸ ಭಕ್ಷಣೆ ಮೂಲಭೂತ ಹಕ್ಕು ಅಲ್ಲ. ಅದನ್ನು ಹತ್ಯೆ ಮಾಡುವ ಹಕ್ಕು ಯಾಗಿಗೂ ಇಲ್ಲ ಎಂದು ಹೇಳಿದೆ. ದೇಶದ ಸಂಸ್ಕೃತಿಗೆ ಧಕ್ಕೆಯಾಗುವುದು ದೇಶವು ದುರ್ಬಲವಾಗುವುದಕ್ಕೆ ಕಾರಣವಾಗುತ್ತದೆ. ಆದ್ದರಿಂದ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಲು ಕ್ರಮ ಕೈಗೊಳ್ಳಬೇಕಿದೆ ಎಂದು ಹೈಕೋರ್ಟ್ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.