ಬೆಂಗಳೂರು: ರಾಜ್ಯದ ದೈಹಿಕ ಶಿಕ್ಷಣ ಶಿಕ್ಷಕರ ಬಹುಕಾಲದ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಲು ಅಗತ್ಯವಾದ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಬಿ. ಸಿ. ನಾಗೇಶ್ ತಿಳಿಸಿದ್ದಾರೆ.
ಅವರು ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಆಯೋಜಿಸಿದ್ದ ಕಾರ್ಯಕಾರಿ ಸಭೆಯನ್ನು ಉದ್ಘಾಟಿಸಿ, ಬಳಿಕ ಮಾತನಾಡಿದರು.
ಮಕ್ಕಳಲ್ಲಿ ಶಿಸ್ತು ಬೆಳೆಯುವಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಮಹತ್ವದ್ದು. ರಾಜ್ಯದ ದೈ. ಶಿ. ಶಿಕ್ಷಕರ ಬಹುಕಾಲದ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಶಿಕ್ಷಕ, ಪದವೀಧರ ವಿಧಾನಪರಿಷತ್ ಶಾಸಕರ ಬೆಂಬಲ ಸಹ ಇರುವುದಾಗಿ ಅವರು ತಿಳಿಸಿದ್ದಾರೆ.
ಕೊರೋನಾ ಸಂದರ್ಭದಲ್ಲಿ ಭೌತಿಕ ತರಗತಿಗಳು ನಡೆಯದೇ ಇದ್ದು, ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ. ತಾವು ಪ್ರತಿ ಹಂತದಲ್ಲಿಯೂ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಮಕ್ಕಳಿಗೆ ಪ್ರೇರಣೆಗಳಾಗುವಂತೆಯೂ ಸಚಿವರು ದೈ. ಶಿ ಶಿಕ್ಷಕರಿಗೆ ಕಿವಿಮಾತು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.