ನವದೆಹಲಿ: ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಲಸಿಕಾ ಅಭಿಯಾನದಿಂದ ಹಿಡಿದು, ಇನ್ನೂ ಹಲವಾರು ಮಹತ್ವದ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ.
ಕೊರೋನಾದಿಂದ ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಲಸಿಕೆ ಪಡೆಯಲು ಗೂಗಲ್ ಮೂಲಕವೂ ಸ್ಲಾಟ್ ಬುಕ್ ಮಾಡಬಹುದಾಗಿದೆ ಎಂದು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ. ಈಗಾಗಲೇ ಕೋವಿನ್ ಸೇರಿದಂತೆ ಲಸಿಕೆ ಪಡೆಯಲು ನೋಂದಣಿಗಾಗಿ ಜನರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಉಪಕ್ರಮಗಳನ್ನು ಕೈಗೊಂಡಿದೆ. ಅದಕ್ಕೆ ಪೂರಕವಾಗಿ ಇದೀಗ ಗೂಗಲ್ ಮೂಲಕವೂ ಸ್ಲಾಟ್ ಬುಕ್ ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಒದಗಿಸಿದೆ.
ಈ ಬಗ್ಗೆ ಮನ್ಸುಖ್ ಮಾಂಡವಿಯಾ ಅವರು ತಮ್ಮ ಟ್ವಿಟ್ಟರ್ ಪುಟದಲ್ಲಿ ಬರೆದುಕೊಂಡಿದ್ದು, ಗೂಗಲ್ಗೆ ಭೇಟಿ ನೀಡಿ ಅದರಲ್ಲಿ ಕೋವಿಡ್ ವ್ಯಾಕ್ಸಿನ್ ನಿಯರ್ ಟು ಮಿ ಎಂದು ಸರ್ಚ್ ಮಾಡುವ ಮೂಲಕ, ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಮಾಹಿತಿ, ಅಲ್ಲಿ ಲಸಿಕೆ ಲಭ್ಯತೆಯ ಬಗ್ಗೆ ಮಾಹಿತಿ ಪಡೆಯಬಹುದು. ಹಾಗೆಯೇ ಸ್ಲಾಟ್ ಬುಕ್ ಮಾಡಲು ಅಲ್ಲಿರುವ ಅಪಾಯಿಂಟ್ಮೆಂಟ್ ಮೇಲೆ ಕ್ಲಿಕ್ ಮಾಡುವಂತೆಯೂ ಅವರು ತಿಳಿಸಿದ್ದಾರೆ.
The @MoHFW_INDIA has taken yet another significant initiative to enhance access to #COVID19 vaccine:
🔎 Search 'covid vaccine near me' on Google
✅ Check availability of slots & more
💉 Use 'Book Appointment' feature to book a slot
📖 More details: https://t.co/zsI9A5fkCp
— Mansukh Mandaviya (@mansukhmandviya) September 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.