ನವದೆಹಲಿ: ಅಫ್ಘಾನಿಸ್ಥಾನದಲ್ಲಿ ಮುಂದಿನ ದಿನಗಳಲ್ಲಿ ಯಾವ ರೀತಿಯ ಸರ್ಕಾರ ರಚನೆಯಾಗಲಿದೆ ಎಂದು ನಮಗೆ ತಿಳಿದಿಲ್ಲ. ಸದ್ಯಕ್ಕೆ ನಮ್ಮ ಗುರಿ ಅಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಣೆ, ಸ್ಥಳಾಂತರ ಮಾಡುವುದು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಅಫ್ಘಾನಿಸ್ಥಾನದಲ್ಲಿ ತಾಲೀಬಾನ್ ರಚಿಸಲಿರುವ ಸರ್ಕಾರದ ಸ್ವರೂಪಗಳ ಬಗ್ಗೆ ಯಾವುದೇ ಮಾಹಿತಿ ಭಾರತಕ್ಕಿಲ್ಲ. ಆದರೆ ಕಳೆದ ಕೆಲ ದಿನಗಳಿಂದ ಅಫ್ಘನಿಸ್ಥಾನದಲ್ಲಿರುವ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ನಿಲ್ಲಿಸಲಾಗಿದ್ದು, ಅದನ್ನು ಕಾಬೂಲ್ನ ವಿಮಾನ ನಿಲ್ದಾಣದಿಂದ ಮತ್ತೆ ಆರಂಭಿಸಲಾಗುವುದು ಎಂದು ತಿಳಿಸಿದೆ.
ಪ್ರಸ್ತುತ ಕಾಬೂಲ್ ವಿಮಾನ ನಿಲ್ದಾಣದಿಂದ ಯಾವುದೇ ಸೇವೆಗಳು ಲಭ್ಯವಿಲ್ಲ. ಅಲ್ಲಿ ಸೇವೆಗಳು ಮತ್ತೆ ಆರಂಭವಾದ ತಕ್ಷಣವೇ ಭಾರತೀಯರ ಸ್ಥಳಾಂತರ ಕಾರ್ಯಾಚರಣೆ ಮತ್ತೆ ಆರಂಭವಾಗಲಿದೆ. ಹಾಗೆಯೇ ಅಫ್ಘಾನಿಸ್ಥಾನದ ಭೂಮಿಯನ್ನು ಯಾವುದೇ ರೀತಿಯ ಉಗ್ರ ಚಟುವಟಿಕೆಗಳಿಗೆ ಬಳಕೆಯಾಗದಂತೆ ಎಚ್ಒರ ವಹಿಸುವುದು ನಮ್ಮ ಉದ್ದೇಶ. ಈ ಸಂಬಂಧ ತಾಲೀಬಾನ್ ಜೊತೆಗೆ ಮೊದಲ ಔಪಚಾರಿಕ ಸಂಪರ್ಕ ಸಹ ಸಾಧಿಸಲಾಗಿದೆ ಎಂದು ಸಚಿವಾಲಯವು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.