ಟೊಕಿಯೋ: ಜಪಾನ್ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ ಪದಕ ಲಭಿಸಿದೆ.
ಟಿ-64 ಪುರುಷರ ವಿಭಾಗದ ಹೈಜಂಪ್ ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಅವರು ಬೆಳ್ಳಿ ಪದಕ ಗೆಲ್ಲುವ ಮೂಲಕ, ದೇಶದ ಸಾಧನೆಯನ್ನು ಮತ್ತಷ್ಟು ಎತ್ತರಕ್ಕೆ ಏರಿಸಿದ್ದಾರೆ.
ಇವರ ಈ ಸಾಧನೆಗೆ ಶ್ಲಾಘನೆ ವ್ಯಕ್ತಪಡಿಸಿ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದು, ಪ್ಯಾರಾಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ವಿಜೇತರಾದ ಪ್ರವೀಣ್ ಕುಮಾರ್ ಅವರ ಸಾಧನೆಯ ಬಗ್ಗೆ ಹೆಮ್ಮೆಯಾಗುತ್ತಿದೆ. ಈ ಪದಕ ಅವರ ಕಠಿಣ ಶ್ರಮ ಮತ್ತು ಸಮರ್ಪಣಾ ಮನೋಭಾವಕ್ಕೆ ಸಿಕ್ಕ ಫಲಿತಾಂಶವಾಗಿದೆ. ಅವರ ಮುಂದಿನ ಭವಿಷ್ಯಕ್ಕೆ ಶುಭಹಾರೈಕೆಗಳು ಎಂದು ತಿಳಿಸಿದ್ದಾರೆ.
Proud of Praveen Kumar for winning the Silver medal at the #Paralympics. This medal is the result of his hard work and unparalleled dedication. Congratulations to him. Best wishes for his future endeavours. #Praise4Para
— Narendra Modi (@narendramodi) September 3, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.