ಬೆಂಗಳೂರು: ರಾಜ್ಯದ ಕಲ್ಬುರ್ಗಿ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಗಳ ಚುನಾವಣೆ ನಡೆಯುತ್ತಿದ್ದು, ಇಂದು ಮುಂಜಾನೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ.
ಕಲ್ಬುರ್ಗಿ ಮಹಾನಗರ ಪಾಲಿಕೆಯ ಚುನಾವಣೆ ಬೆಳಗ್ಗೆ 7 ಗಂಟೆಯಿಂದಲೇ ಆರಂಭವಾಗಿದ್ದು, ಸುಗಮವಾಗಿ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಮೂಲಗಳು ಹೇಳಿವೆ.
ಹಾಗೆಯೇ, ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯೂ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದಲೇ ಶಾಂತಿಯುತವಾಗಿ ಮತದಾನ ಪ್ರಕ್ರಿಯೆಗಳು ಆರಂಭವಾಗಿದೆ. ಹುಬ್ಬಳ್ಳಿ ಮತ್ತು ಬೆಳಗಾವಿ.ಮಹಾನಗರ ಪಾಲಿಕೆಗಳಿಗೂ ಚುನಾವಣೆ ನಡೆಯುತ್ತಿದ್ದು, ಮುಂಜಾನೆ 7 ಗಂಟೆಯಿಂದಲೇ ಮತದಾರರು ಮತಗಟ್ಟೆಗಳತ್ತ ತೆರಳಿ ತಮ್ಮ ಹಕ್ಕು ಚಲಾಯಿಸಲು ಆರಂಭಿಸಿರುವುದಾಗಿ ಮೂಲಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.