ಟೊಕಿಯೋ: ಜಪಾನಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಕ್ರೀಡಾಕೂಟ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಅವನಿ ಲೇಖರ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಈ ವಾರದ ಆರಂಭದಲ್ಲಿ ಅವನಿ ಶೂಟಿಂಗ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದರು. ಇದೀಗ ಆರ್8 ಮಹಿಳಾ 50 ಮೀ. ರೈಫಲ್ 3ಪಿ ಎಸ್ ಎಚ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿ, ಎರಡು ಪದಕಗಳ ಹಿರಿಮೆಯನ್ನು ದೇಶಕ್ಕೆ ತಂದುಕೊಟ್ಟಿದ್ದಾರೆ.
ಅವನಿ ಅವರು ಕಳೆದ ಸೋಮವಾರ ಬಂಗಾರದ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದರು. ಹಾಗೆಯೇ, ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಮಹಿಳೆ ಎಂಬ ಕೀರ್ತಿಗೂ ಭಾಜನರಾಗಿದ್ದಾರೆ.
ಇವರ ಈ ಸಾಧನೆಗೆ ಪ್ರಧಾನಿ ಮೋದಿ ಅವರು ಶುಭಹಾರೈಸಿದ್ದು, ಪ್ಯಾರಾಲಿಂಪಿಕ್ಸ್‌ನಲ್ಲಿ ಅವನಿ ಅವರ ಅತ್ಯದ್ಭುತ ಪ್ರದರ್ಶನ, ವೈಭವದಿಂದ ಹರ್ಷವಾಗಿದೆ. ದೇಶಕ್ಕೆ ಕಂಚಿನ ಪದಕ ತಂದುಕೊಟ್ಟ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ಶುಭಹಾರೈಕೆಗಳು ಎಂದು ತಿಳಿಸಿದ್ದಾರೆ.
More glory at the Tokyo #Paralympics. Elated by the stupendous performance of @AvaniLekhara. Congratulations to her on bringing home the Bronze medal. Wishing her the very best for her future endeavours. #Praise4Para
— Narendra Modi (@narendramodi) September 3, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.