ನವದೆಹಲಿ: ಗುಜರಾತ್ ಸರ್ಕಾರವು ಮುಂದಿನ ವರ್ಷ ಗಾಂಧಿನಗರದಲ್ಲಿ 12 ನೇ ಡಿಫೆನ್ಸ್ ಎಕ್ಸ್ಪೋ -2022 ಅನ್ನು ಆಯೋಜಿಸುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕೆವಾಡಿಯಾದಲ್ಲಿ ಭೇಟಿಯಾದ ನಂತರ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ.
ಅಧಿಕೃತ ಮೂಲಗಳ ಪ್ರಕಾರ, ಈ ಸಂಬಂಧ ರಕ್ಷಣಾ ಉತ್ಪಾದನಾ ಇಲಾಖೆ ಮತ್ತು ಗುಜರಾತ್ ಸರ್ಕಾರದ ನಡುವೆ ಒಪ್ಪಂದ ಪತ್ರಕ್ಕೆ ಸಹಿ ಹಾಕಲಾಗಿದೆ. ಈ ದ್ವೈವಾರ್ಷಿಕ ಕಾರ್ಯಕ್ರಮದಲ್ಲಿ ಸುಮಾರು 100 ದೇಶಗಳು ಭಾಗವಹಿಸುವ ನಿರೀಕ್ಷೆಯಿದೆ.
ಡಿಫೆನ್ಸ್ ಎಕ್ಸ್ಪೋ -2022 ಮುಂದಿನ ವರ್ಷ ಮಾರ್ಚ್ 10 ರಿಂದ 13 ರವರೆಗೆ ಗಾಂಧಿನಗರದಲ್ಲಿ ನಡೆಯಲಿದೆ. ಗುಜರಾತ್ ನಲ್ಲಿ ಡಿಫೆನ್ಸ್ ಎಕ್ಸ್ ಪೋ -2022 ಆಯೋಜಿಸುವ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ವಿಜಯ್ ರೂಪಾನಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಗುಜರಾತ್ ಸರ್ಕಾರ ಮತ್ತು ರಕ್ಷಣಾ ಉತ್ಪಾದನಾ ಇಲಾಖೆಯು ಡಿಫೆನ್ಸ್ ಎಕ್ಸ್ಪೋವನ್ನು ಆಯೋಜಿಸಲು ಬೆಂಬಲವನ್ನು ನೀಡಲು ಎಂಒಯುಗೆ ಸಹಿ ಹಾಕಿದೆ. ರಾಜ್ಯವು ಅತ್ಯುತ್ತಮ ಹೂಡಿಕೆ ತಾಣವಾಗಿದೆ ಮತ್ತು ಡಿಫೆನ್ಸ್ ಎಕ್ಸ್ಪೋ -2022 ರ ನಂತರ, ಇದು ರಕ್ಷಣಾ ವಲಯದಲ್ಲಿ ಅಗ್ರ ಹೂಡಿಕೆಯ ತಾಣವಾಗಿ ಹೊರಹೊಮ್ಮಲಿದೆ ಎಂದು ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಡಿಫೆನ್ಸ್ ಎಕ್ಸ್ಪೋ -2022 ಮೂಲಕ ಭಾರತವನ್ನು ರಕ್ಷಣಾ ಉತ್ಪಾದನಾ ಕೇಂದ್ರವನ್ನಾಗಿ ಮಾಡುವತ್ತ ಗಮನ ಹರಿಸುವುದಾಗಿ ಹೇಳಿದ್ದಾರೆ. ಮೇಕ್ ಇನ್ ಇಂಡಿಯಾದಿಂದ ಜಗತ್ತನ್ನು ರೂಪಿಸುವುದು ನಮ್ಮ ಗುರಿಯಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.