ನವದೆಹಲಿ: ಭಾರತ ಸ್ವಾತಂತ್ರ್ಯದ 75 ನೇ ವರ್ಷಾಚರಣೆಯ ಅಂಗವಾಗಿ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆ ನಡೆಯುತ್ತಿದ್ದು, ಇದರ ಅಂಗವಾಗಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ದೇಶಾದ್ಯಂತ 10 ಸೈಕಲ್ ರ್ಯಾಲಿಗಳನ್ನು ಆಯೋಜಿಸುತ್ತಿದೆ.
10 ರ್ಯಾಲಿಗಳಲ್ಲಿ ಅತಿ ಉದ್ದದ ರ್ಯಾಲಿ ನಾಳೆ ಪುಣೆಯ ಐತಿಹಾಸಿಕ ಯರವಾಡ ಜೈಲಿನಿಂದ ಆರಂಭವಾಗಿ ದೆಹಲಿಯ ರಾಜ್ ಘಾಟ್ ನಲ್ಲಿ ಮುಕ್ತಾಯಗೊಳ್ಳಲಿವೆ.
1,703 ಕಿಮೀ ಉದ್ದದ ಮಾರ್ಗದಲ್ಲಿ ಸಾಗುವ ರ್ಯಾಲಿಯು ಐತಿಹಾಸಿಕವಾಗಿ ಮಹತ್ವದ ತಾಣಗಳು ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದ ವೀರರ ಜನ್ಮಸ್ಥಳಗಳನ್ನು ತಲುಪಲಿದ್ದು, 27 ದಿನಗಳವರೆಗೆ ನಡೆಯಲಿದೆ. 12 ಸಿಐಎಸ್ಎಫ್ ಸೈಕ್ಲಿಸ್ಟ್ಗಳ ತಂಡವು ರ್ಯಾಲಿಯಲ್ಲಿ ಭಾಗವಹಿಸಲಿದ್ದು, ಸಹಾಯಕ ಸಬ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ನಡೆಯಲಿದೆ.
ನಾಳೆ ಬೆಳಿಗ್ಗೆ ಪುಣೆಯ ಯರವಾಡ ಜೈಲಿನಿಂದ ರ್ಯಾಲಿಗೆ ಚಾಲನೆ ನೀಡಲಾಗುತ್ತಿದೆ. ಮಹಾತ್ಮ ಗಾಂಧಿಯವರನ್ನು ಮೂರು ಬಾರಿ ಈ ಜೈಲಿನಲ್ಲಿ ಇರಿಸಲಾಗಿತ್ತು.
ಅಕ್ಟೋಬರ್ 2 ರಂದು ಮಹಾತ್ಮ ಗಾಂಧಿಯವರ ಸಮಾಧಿ ರಾಜ್ಘಾಟ್ನಲ್ಲಿ ರ್ಯಾಲಿ ಕೊನೆಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.