ನವದೆಹಲಿ: ಸೆಪ್ಟೆಂಬರ್ 5ರಂದು ಆಚರಿಸಲ್ಪಡುವ ಶಿಕ್ಷಕರ ದಿನಾಚರಣೆಯಂದು ಶಿಕ್ಷಕ್ ಪರ್ವ್-2021 ಆರಂಭಿಸಲು ಕೇಂದ್ರ ಶಿಕ್ಷಣ ಸಚಿವಾಲಯ ನಿರ್ಧರಿಸಿದೆ. ಈ ಕಾರ್ಯಕ್ರಮ ಸೆಪ್ಟೆಂಬರ್ 17ರವರೆಗೆ ಮುಂದುವರೆಯಲಿದೆ.
ಕೇಂದ್ರ ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತೆಯ ಹೆಚ್ಚುವರಿ ಕಾರ್ಯದರ್ಶಿ ಸಂತೋಷ್ ಕುಮಾರ್ ಸಾರಂಗಿ ಅವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಶಿಕ್ಷಕರ ಅಮೂಲ್ಯ ಕೊಡುಗೆಗಳನ್ನು ಗುರುತಿಸಿ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ -2020ರ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿಡಲು ಈ ವರ್ಷವೂ ಶಿಕ್ಷಕ ಪರ್ವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಶಿಕ್ಷಕ ಪರ್ವ- 2021 ಶಿಕ್ಷಕರ ದಿನದಿಂದ ಪ್ರಾರಂಭವಾಗುತ್ತದೆ ಮತ್ತು ವರ್ಚುವಲ್ ಮೋಡ್ ಮೂಲಕ ಸೆಪ್ಟೆಂಬರ್ 17 ರವರೆಗೆ ಮುಂದುವರಿಯುತ್ತದೆ.
ಎರಡು ಕೋಟಿಗೂ ಹೆಚ್ಚು ಶಿಕ್ಷಕರಿಗೆ ಲಸಿಕೆ ಹಾಕುವ ಅಭಿಯಾನವನ್ನು ನಡೆಸಲಾಗುತ್ತಿದೆ. ರಾಜ್ಯಗಳಲ್ಲಿ ಲಸಿಕೆಯ ಪ್ರಗತಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಿಂದ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಶಾಲೆ ಪುನರಾರಂಭಕ್ಕೆ ಸಂಬಂಧಿಸಿದಂತೆ ಶಿಕ್ಷಕರಿಗೆ ಲಸಿಕೆ ನೀಡುವುದು ಅವಶ್ಯಕ ಎಂದು ಸಾರಂಗಿ ಹೇಳಿದ್ದಾರೆ.
ಶಿಕ್ಷಕರ ದಿನದಂದು ವರ್ಚುವಲ್ ಮೋಡ್ ಮೂಲಕ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು 44 ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿಗಳನ್ನು ನೀಡಲಿದ್ದಾರೆ ಎಂದು ಮಾಹಿತಿ ಅವರು ನೀಡಿದ್ದಾರೆ. ಪ್ರಶಸ್ತಿ ಪಡೆದ ಪ್ರತಿ ಶಿಕ್ಷಕರ ಕುರಿತ ಸಾಕ್ಷ್ಯಚಿತ್ರವನ್ನು ಸಹ ಪ್ರದರ್ಶಿಸಲಾಗುವುದು ಎಂದು ಅವರು ಹೇಳಿದ್ದಾರೆ. ಯುವಕರ ಮನಸ್ಸನ್ನು ಹಾಗೂ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕರ ಶ್ರೇಷ್ಠತೆ ಮತ್ತು ಬದ್ಧತೆಯನ್ನು ಗುರುತಿಸಲು 1958 ರಲ್ಲಿ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ನೀಡಲು ಪ್ರಾರಂಭಿಸಲಾಯಿತು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕೆಲಸ ಮಾಡುವ ಅರ್ಹ ಶಿಕ್ಷಕರಿಗೆ ಸಾರ್ವಜನಿಕ ಮನ್ನಣೆ ನೀಡುವುದು ಈ ಪ್ರಶಸ್ತಿಯ ಉದ್ದೇಶ.
ಸೆಪ್ಟೆಂಬರ್ 7 ರಂದು ಬೆಳಗ್ಗೆ 11 ಗಂಟೆಗೆ ಶಿಕ್ಷಣಕ್ಕೆ ಸಂಬಂಧಿಸಿದ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.