ಬೆಂಗಳೂರು: ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇಂದು ಆಯೋಜಿಸಿದ್ದ ‘ಟೊಕಿಯೋ ಒಲಿಂಪಿಕ್ಸ್2020’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉಪಸ್ಥಿತರಿದ್ದ ಈ ಕಾರ್ಯಕ್ರಮದಲ್ಲಿ ಕೆಲ ದಿನಗಳ ಹಿಂದಷ್ಟೇ ನಡೆದ ಟೊಕಿಯೋ ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ ರಾಜ್ಯದ ಕ್ರೀಡಾಪಟುಗಳಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ಸಿಎಂ ಬೊಮ್ಮಾಯಿ ಅವರು ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ವಿತರಿಸಿ ಗೌರವ ಸಲ್ಲಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 'ಟೋಕಿಯೋ ಒಲಂಪಿಕ್ಸ್ 2020'ರಲ್ಲಿ ಭಾಗವಹಿಸಿದ ರಾಜ್ಯದ ಕ್ರೀಡಾಪಟುಗಳಿಗೆ ಘನತೆವೆತ್ತ ರಾಜ್ಯಪಾಲ @TCGEHLOT ರವರ ಸಮಕ್ಷಮದಲ್ಲಿ ಮುಖ್ಯಮಂತ್ರಿ @BSBommai ರವರು ಅಭಿನಂದನೆ ಸಲ್ಲಿಸಿ, ಪ್ರೋತ್ಸಾಹಧನ ವಿತರಿಸಿದರು. (1/2) pic.twitter.com/FPwy9OG0Ou
— CM of Karnataka (@CMofKarnataka) September 3, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.