ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಆರಂಭಿಸಲಾಗಿರುವ ಲಸಿಕಾ ಅಭಿಯಾನಕ್ಕೆ ರಾಜ್ಯದಲ್ಲಿಯೂ ದೊಡ್ಡ ಮಟ್ಟದ ಮುನ್ನಡೆ ದೊರೆತಿದೆ.
ಲಸಿಕಾ ಅಭಿಯಾನ ಆರಂಭವಾದಂದಿನಿಂದ ಈ ವರೆಗೆ ರಾಜ್ಯದಲ್ಲಿ 1 ಕೋಟಿ ಜನರಿಗೆ ಲಸಿಕೆ ವಿತರಿಸಲಾಗಿದೆ ಎಂದು ರಾಜ್ಯದ ಆರೋಗ್ಯ ಇಲಾಖೆ ತಿಳಿಸಿದೆ. ಆ ಮೂಲಕ ಒಂದು ಕೋಟಿ ಲಸಿಕೆ ಜನರಿಗೆ ಹಾಕಿಸಿದ ಆರನೇ ರಾಜ್ಯ ಎಂಬ ಖ್ಯಾತಿಗೂ ಕರ್ನಾಟಕ ಭಾಜನವಾಗಿದೆ.
ಇನ್ನು ರಾಷ್ಟ್ರದ ಮಹಾನಗರಗಳಿಗೆ ಸಂಬಂಧಿಸಿದಂತೆ ನವದೆಹಲಿಯ ನಂತರ ಒಂದು ಕೋಟಿ ಲಸಿಕೆ ನೀಡಿದ ರಾಜ್ಯವಾಗಿ ಬೆಂಗಳೂರು ಸ್ಥಾನ ಪಡೆದಿದೆ. ರಾಜ್ಯದಲ್ಲೇ ಬೆಂಗಳೂರು 100% ಗಳಷ್ಟು ಮೊದಲ ಡೋಸ್ ಲಸಿಕೆ ನೀಡಿದ ಮೊದಲ ಜಿಲ್ಲೆಯಾಗಿದೆ.
ಈ ಬಗ್ಗೆ ಕರ್ನಾಟಕ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕರ್ನಾಟಕ ಈವರೆಗೆ 4 ಕೋಟಿ ಲಸಿಕೆ ನೀಡಿದ್ದು, 3 ಕೋಟಿ ಜನರಿಗೆ ಮೊದಲ ಡೋಸ್ ಮತ್ತು 1 ಕೋಟಿ ಜನರಿಗೆ ಎರಡೂ ಡೋಸ್ ಲಸಿಕೆಗಳನ್ನು ನೀಡಲಾಗಿದೆ ಎಂದು ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.