ಬೆಂಗಳೂರು: ಉಗ್ರವಾದಿ ಸಂಘಟನೆಯ ಪಿತೂರಿಯ ಭಾಗವಾಗಿ, ಮುಂಬೈನಲ್ಲಿ ಶಸ್ತ್ರಾಸ್ತ್ರಗಳನ್ನು, ಮದ್ದುಗುಂಡುಗಳ ಸಂಗ್ರಹ ಮತ್ತು ಪೂರೈಕೆಯಲ್ಲಿ ತೊಡಗಿರುವ ಆರೋಪದ ಮೇಲೆ ಐಸಿಸ್ ಉಗ್ರಗಾಮಿಯ ಮೇಲೆ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿ ಉಗ್ರಗಾಮಿ ಶಿಹಾಬುದ್ದೀನ್ ವಿರುದ್ಧ ಭಾರತೀಯ ದಂಡ ಸಂಹಿತೆ, ಶಸ್ತ್ರಾಸ್ತ್ರ ಕಾಯ್ದೆ, ಕಾನೂನು ಬಾಹಿರ ಚಟುವಟಿಕೆಗಳ ಕಾಯ್ದೆ ಅಡಿಯಲ್ಲಿ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಶಿಹಾಬುದ್ದೀನ್ ಭಯೋತ್ಪಾದನಾ ಚಟುವಟಿಕೆಯ ಪಿತೂರಿಯ ದೊಡ್ಡ ಭಾಗವಾಗಿದ್ದು, ಈ ಹಿನ್ನೆಲೆಯಲ್ಲಿ ಈತನ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ವರ್ಷ ಉಗ್ರಗಾಮಿ ಸಂಘಟನೆಯ ನಂಟಿದ್ದ ಬೆಂಗಳೂರು ಮೂಲದ ಮೆಹಬೂಬ್ ಪಾಷಾ ಮತ್ತು 16 ಜನರನ್ನು ದಕ್ಷಿಣ ಭಾರತದಲ್ಲಿ ಯುವ ಮುಸ್ಲಿಮರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ತಂಡ ರಚನೆಯ ಆರೋಪದಲ್ಲಿ ಎನ್ಐಎ ಬಂಧಿಸಿತ್ತು. ಈ ಪ್ರಕರಣದ ಭಾಗವಾಗಿ ಉಗ್ರಗಾಮಿ ಶಿಹಾಬುದ್ದೀನ್ನ ವಿರುದ್ಧ ಇದೀಗ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಈ ತಂಡ ಬೆಂಗಳೂರನ್ನು ಕೇಂದ್ರವಾಗಿರಿಸಿಕೊಂಡು ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಹಲವಾರು ಕ್ರಿಮಿನಲ್ ಪಿತೂರಿ ಸಭೆಗಳನ್ನು ನಡೆಸಿದ್ದಾರೆ. ಹಾಗೆಯೇ ತಮಿಳುನಾಡಿನಲ್ಲಿ ಭಯೋತ್ಪಾದಕ ಕೃತ್ಯಗಳು, ಹಿಂದೂ ನಾಯಕರ ಹತ್ಯೆಗೆ ಸಂಬಂಧಿಸಿದಂತೆ ಹಲವು ಪ್ರಕರಣದಲ್ಲಿ ಭಾಗಿಯಾಗಿರುವ ಉಗ್ರ ಮೊಯ್ದೀನ್ ಎಂಬಾತನೊಂದಿಗೆ ಸೇರಿ ಈ ಎಲ್ಲಾ ಕೃತ್ಯಗಳ ಭಾಗವಾಗಿದ್ದು, ಈ ಹಿನ್ನೆಲೆಯಲ್ಲಿ ಶಿಹಾಬುದ್ದೀನ್ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.