ನವದೆಹಲಿ: ಅಕ್ಟೋಬರ್ 2021 ರ ವೇಳೆಗೆ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ 60 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಕೇಂದ್ರೀಯ ವಿವಿಗಳು ಮಿಷನ್ ಮೋಡ್ನಲ್ಲಿ ಕೆಲಸ ಮಾಡುತ್ತಿವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಹಾಗೆಯೇ ಹಳೆಯ ವಿದ್ಯಾರ್ಥಿ ಚೌಕಟ್ಟನ್ನು ರಚನೆ ಮಾಡುವಂತೆಯೂ ಅವರು ವಾರ್ಸೈಟಿ (Varieties) ಗಳನ್ನು ಒತ್ತಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ಕೇಂದ್ರೀಯ ವಿವಿಗಳ ಉತ್ತಮ ಪದ್ಧತಿಗಳ ಬಗ್ಗೆ, ಸಾಮಾನ್ಯ ಮತ್ತು ಕಾಯ್ದಿರಿಸಿದ ಹುದ್ದೆಗಳನ್ನು ಭರ್ತಿ ಮಾಡುವುದು, ಕೊರೋನಾ ಅವಧಿಯಲ್ಲಿ ಶಿಕ್ಷಣ, ಆನ್ಲೈನ್ ಕಲಿಕೆ, ಎನ್ಇಪಿ ಅನುಷ್ಠಾನದ ಸ್ಥಿತಿ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ತಿಳಿದುಕೊಳ್ಳಲು ಕೇಂದ್ರ ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ.
ದೇಶವನ್ನು ಸಂಪೂರ್ಣ ಸಾಕ್ಷರತಾ ದೇಶವನ್ನಾಗಿಸಲು ವಿವಿಗಳು ಹೊಸ ಕಾರ್ಯತಂತ್ರಗಳನ್ನು ರೂಪಿಸಬೇಕು ಎಂದು ಅವರು ತಿಳಿಸಿದ್ದಾರೆ. ನಮ್ಮ ವಿವಿಗಳು ಸೃಜನಶೀಲತೆ, ನಾವಿನ್ಯತೆ ಮತ್ತು ಅವಕಾಶಗಳ ತೊಟ್ಟಿಲುಗಳಾಗಿವೆ. ನೂಚನ ಶಿಕ್ಷಣ ನೀತಿ ದೇಶವನ್ನು ಅಗ್ರಸ್ಥಾನಕ್ಕೇರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.