ಕಲ್ಬುರ್ಗಿ: ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸುವುದು ಮತ್ತು ಆರ್ಥಿಕವಾಗಿ ಸಮರ್ಥವಾಗುವ ನಿಟ್ಟಿನಲ್ಲಿ ದೇಶಾದ್ಯಂತ 10 ಸಾವಿರ ಕೃಷಿ ಉತ್ಪಾದಕರ ಸಂಘ ರಚಿಸಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಅವರು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ‘ಯುವಕರ ನಡೆ ಕೃಷಿಯ ಕಡೆ’ ಕಾರ್ಯಾಗಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸಂಘ ಸಂಸ್ಥೆಗಳ ರಚನೆಯ ಮೂಲಕ ರೈಚರ ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ, ಸೂಕ್ತ ಬೆಲೆಯ ಜೊತೆಗೆ ಕೃಷಿಗೆ ಪೂರಕವಾದ ಸೂಕ್ತ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆರ್ಥಿಕ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಹತ್ತಾರು ಕಾರ್ಯಕ್ರಮಗಳ ಮೂಲಕ ಕೃಷಿ ಕ್ರಾಂತಿಗೆ ಉದ್ದೇಶಿಸಿರುವುದಾಗಿ ಒವರು ಹೇಳಿದ್ದಾರೆ.
ರೈತರಿಗೆ ಕೇಂದ್ರ ಸರ್ಕಾರ ನೀಡುವ ಸಬ್ಸಿಡಿಯನ್ನು ಅವರ ಖಾತೆಗೆ ಜಮಾ ಮಾಡಲು ಚಿಂತನೆ ನಡೆದಿದೆ ಎಂದು ಅವರು ಹೇಳಿದ್ದಾರೆ. ತೊಗರಿಗೆ ಬೆಂಬಲ ಬೆಲೆ ಹೆಚ್ಚಿಸುವ ಪ್ರಸ್ತಾಪ ಸಹ ಕೇಂದ್ರ ಸರ್ಕಾರದ ಮುಂದಿದೆ ಎಂದು ಅವರು ಹೇಳಿದ್ದಾರೆ. ಹಾಗೆಯೇ ಕೃಷಿ ಉತ್ಪನ್ನಗಳ ಬೆಲೆ ನಿಗದಿಗೆ ಸಂಬಂಧಿಸಿದಂತೆಯೂ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಒಟ್ಟಾರೆ ಜಿಡಿಪಿಯಲ್ಲಿ ಕೃಷಿ ಪಾಲು 25% ಗಳಿಗೆ ಹೆಚ್ಚಿಸುವ ಗುರಿ ಇದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.