ಟೊಕಿಯೋ: ಜಪಾನ್ನ ಟೊಕಿಯೋದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಕ್ರೀಡಾಕೂಟ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತಕ್ಕೆ ಮತ್ತೆ ಚಿನ್ನ ಹಾಗೂ ಕಂಚಿನ ಪದಕಗಳು ಲಭಿಸಿದೆ.
ಭಾರತದ ಬ್ಯಾಡ್ಮಿಂಟನ್ ಪಟು ಪ್ರಮೋದ್ ಭಗತ್ ಅವರು ಪುರಷರ ಸಿಂಗಲ್ಸ್ ಎಸ್ಎಲ್3 ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕುವ ಮೂಲಕ ದೇಶದ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೇರಿಸಿದ್ದಾರೆ.
ಹಾಗೆಯೇ ಇದೇ ಸ್ಪರ್ಧೆಯಲ್ಲಿ ಭಾರತದ ಮನೋಜ್ ಸರ್ಕಾರ್ ಅವರು ಕಂಚು ಗೆಲ್ಲುವ ಮೂಲಕ ಭಾರತದ ಹಿರಿಮೆಯನ್ನು ಹೆಚ್ಚಿಸಿದ್ದಾರೆ.
ಈ ಪದಕವನ್ನೊಳಗೊಂಡಂತೆ ಭಾರತ ಈ ಪ್ಯಾರಾಲಿಂಪಿಕ್ಸ್ನಲ್ಲಿ ಒಟ್ಟು 17 ಪದಕಗಳ ಹಿರಿಮೆಯ ಗರಿಯನ್ನು ತನ್ನದಾಗಿಸಿಕೊಂಡಿದೆ
ಈ ಇಬ್ಬರಿಗೂ ಅಭಿನಂದಿಸಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಪ್ರಮೋದ್ ಭಗತ್ ಅವರು ಇಡೀ ದೇಶದ ಹೃದಯ ಗೆದ್ದಿದ್ದಾರೆ. ಅವರೋರ್ವ ಚಾಂಪಿಯನ್. ಅವರ ಯಶಸ್ಸು ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದೆ. ಅವರು ಈ ಸ್ಪರ್ಧೆಯಲ್ಲಿ ದೃಢತೆ ತೋರಿದ್ದಾರೆ. ಬ್ಯಾಡ್ಮಿಂಟನ್ನಲ್ಲಿ ಚಿನ್ನ ಗೆದ್ದ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಕ್ಕೆ ಶುಭಹಾರೈಕೆಗಳು ಎಂದು ತಿಳಿಸಿದ್ದಾರೆ.
Pramod Bhagat has won the hearts of the entire nation. He is a Champion, whose success will motivate millions. He showed remarkable resilience & determination. Congratulations to him for winning the Gold in Badminton. Best wishes to him for his future endeavours. @PramodBhagat83
— Narendra Modi (@narendramodi) September 4, 2021
ಮನೋಜ್ ಸರ್ಕಾರ್ ಅವರು ಕಂಚಿನ ಪದಕವನ್ನು ಮನೆಗೆ ತಂದಿದ್ದಾರೆ. ಅವರದ್ದು ಅದ್ಭುತ ಪ್ರದರ್ಶನ. ಅವರಿಗೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು ಎಂದು ಹೇಳಿದ್ದಾರೆ.
Overjoyed by @manojsarkar07’s wonderful performance. Congrats to him for bringing home the prestigious Bronze Medal in badminton. Wishing in the very best for the times ahead. #Paralympics #Praise4Para
— Narendra Modi (@narendramodi) September 4, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.