ಟೊಕಿಯೋ: ಜಪಾನಿನ ಟೊಕಿಯೋದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಕ್ರೀಡಾಕೂಟ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತಕ್ಕೆ ಮತ್ತೊಂದು ಪದಕದ ಗರಿ ಲಭಿಸಿದೆ.
ಪ್ಯಾರಾಲಿಂಪಿಕ್ಸ್ನಲ್ಲಿ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾರತದ ಕ್ರೀಡಾಪಟು, ಕನ್ನಡಿಗ ಸುಹಾಸ್ ಎಲ್. ಯತಿರಾಜ್ ಅವರು ಬೆಳ್ಳಿ ಪದಕದ ಜೊತೆಗೆ ವಿಜಯದ ನಗೆ ಬೀರಿದ್ದಾರೆ. ಇವರು ಕರ್ನಾಟಕ ಮೂಲದ ಐಎಎಸ್ ಅಧಿಕಾರಿ.
ಇವರ ಈ ಸಾಧನೆಗೆ ಪ್ರಧಾನಿ ಮೋದಿ ಅವರು ಅಭಿನಂದಿಸಿ ಟ್ವೀಟ್ ಮಾಡಿದ್ದು, ಸೇವೆ ಮತ್ತು ಕ್ರೀಡೆಯ ಅದ್ಭುತ ಸಂಗಮ. ಸುಹಾಸ್ ಯತಿರಾಜ್ ಅವರು ತಮ್ಮ ಅಸಾಧಾರಣ ಕ್ರೀಡಾ ಸಾಧನೆಯ ಮೂಲಕ ಇಡೀ ರಾಷ್ಟ್ರದ ಪರಿಕಲ್ಪನೆಯನ್ನು ಸೆರೆಹಿಡಿದಿದ್ದಾರೆ. ಬ್ಯಾಡ್ಮಿಂಟನ್ನಲ್ಲಿ ಬೆಳ್ಳಿ ಗೆದ್ದ ಅವರಿಗೆ ಅಭಿನಂದನೆಗಳು. ಅವರ ಭವಿಷ್ಯಕ್ಕೆ ಶುಭವಾಗಲಿ ಎಂದು ಹಾರೈಸಿದ್ದಾರೆ.
A fantastic confluence of service and sports! @dmgbnagar Suhas Yathiraj has captured the imagination of our entire nation thanks to his exceptional sporting performance. Congratulations to him on winning the Silver medal in Badminton. Best wishes to him for his future endeavours. pic.twitter.com/bFM9707VhZ
— Narendra Modi (@narendramodi) September 5, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.