ಬೆಂಗಳೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ರಾಜ್ಯ ಸರ್ಕಾರ ರಾಜ್ಯದ ಶಿಕ್ಷಕರಿಗೆ ಶುಭ ಸಮಾಚಾರ ನೀಡಿದೆ.
ರಾಜ್ಯದಲ್ಲಿ ಶಿಕ್ಷಕರ ಕೊರತೆ ಇದ್ದು, ಐದು ಸಾವಿರ ಶಿಕ್ಷಕರನ್ನು ನೇಮಕ ಮಾಡುವುದಾಗಿ ತಿಳಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಯಾಗಲು ಶಿಕ್ಷಕರ ಪಾತ್ರ ಮಹತ್ವದ್ದು. ಶಿಕ್ಷಕರ ಕೊರತೆಯಾದರೆ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತದೆ. ಆದ್ದರಿಂದ ರಾಜ್ಯದಲ್ಲಿ ಐದು ಸಾವಿರ ಶಿಕ್ಷಕರ ನೇಮಕಕ್ಕೆ ತೀರ್ಮಾನ ಕೈಗೊಳ್ಳಲಾಗಿದ್ದು, ಅದರಂತೆ ಈ ವರ್ಷದೊಳಗಾಗಿ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.