ನವದೆಹಲಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲು, QUAD ಶೃಂಗಸಭೆಯಲ್ಲಿ ಭಾಗವಹಿಸಲು ಮತ್ತು UNGA ಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳು ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.
ದ್ವಿಪಕ್ಷೀಯ ಬಾಂಧವ್ಯ ಗಟ್ಟಿಗೊಳಿಸುವಿಕೆ, ಅಫ್ಘಾನಿಸ್ಥಾನದ ಸ್ಥಿರತೆ, ಭಯೋತ್ಪಾದನೆ ನಿಗ್ರಹ, ಇಂಡೋ-ಪೆಸಿಫಿಕ್ ಮತ್ತು ಹವಾಮಾನ ಬದಲಾವಣೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಯ ಅಜೆಂಡಾವಾಗಿದೆ.
ಪ್ರಧಾನಮಂತ್ರಿ ಮೋದಿಯವರ ಕಾರ್ಯಕ್ರಮಗಳ ವೇಳಾಪಟ್ಟಿಯನ್ನು ತಂಡವು ರೂಪಿಸಲಿದ್ದು, ಇದು ಸೆಪ್ಟೆಂಬರ್ 9 ರಂದು ಅಮೆರಿಕಗೆ ತೆರಳುವ ನಿರೀಕ್ಷೆಯಿದೆ. ಮೋದಿ ಭೇಟಿ ಸೆಪ್ಟೆಂಬರ್ 23 ರಂದು ವಾಷಿಂಗ್ಟನ್ನಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರೊಂದಿಗೆ ದ್ವಿಪಕ್ಷೀಯವಾಗಿ ಪ್ರಾರಂಭವಾಗುವ ನಿರೀಕ್ಷೆ ಇದೆ. ಮರುದಿನ QUAD ಪಾಲುದಾರರ ಭೌತಿಕ ಶೃಂಗ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಭಾರತಕ್ಕೆ ಹಿಂದಿರುಗುವ ಮೊದಲು ಸೆಪ್ಟೆಂಬರ್ 25 ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವ ನಿರೀಕ್ಷೆಯಿದೆ.
ಮಾರ್ಚ್ 2021 ರಲ್ಲಿ ಬಾಂಗ್ಲಾದೇಶಕ್ಕೆ ತೆರಳಿದ ನಂತರ ಪ್ರಧಾನಿ ಮೋದಿಯವರ ಮೊದಲ ಅಂತರರಾಷ್ಟ್ರೀಯ ಭೇಟಿ ಇದಾಗಿದೆ.
ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವುದರ ಜೊತೆಗೆ, ತಾಲಿಬಾನ್ ನಿಯಂತ್ರಿತ ಅಫ್ಘಾನಿಸ್ಥಾನದ ಇಸ್ಲಾಮಿಕ್ ಎಮಿರೇಟ್ ಮತ್ತು ಇಂಡೋ-ಪೆಸಿಫಿಕ್ನ ಭದ್ರತೆ ಸೇರಿದಂತೆ ನಿರ್ಣಾಯಕ ವಿಷಯಗಳು ಮೋದಿ ಭೇಟಿಯ ಅಜೆಂಡಾವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.