ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಇತಿಹಾಸ ಬರೆದಿದೆ.
ಇದೇ ಮೊದಲ ಬಾರಿ ಬೆಳಗಾವಿ ಮಹಾನಗರ ಪಾಲಿಕೆಯ ಗದ್ದುಗೆಯಲ್ಲಿ ಬಿಜೆಪಿ ವಿರಾಜಮಾನವಾಗಿದೆ.
ಬೆಳಗಾವಿಯಲ್ಲಿ ಬರೋಬ್ಬರಿ 25 ವರ್ಷಗಳ ಬಳಿಕ ಅಭ್ಯರ್ಥಿಗಳು ಪಕ್ಷದ ಚಿಹ್ನೆ ಬಳಕೆ ಮಾಡಿ ಸ್ಪರ್ಧಿಸಿದ್ದರು. ಇದೀಗ ಈ ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ ಅಧಿಕಾರವನ್ನು ತನ್ನದಾಗಿಸಿಕೊಂಡಿದ್ದಾರೆ. ಬೆಳಗಾವಿಯಲ್ಲಿ ಮ್ಯಾಜಿಕ್ ನಂ. 28 ಆಗಿದ್ದು, ಈ ಪೈಕಿ ಬಿಜೆಪಿ ಈಗಾಗಲೇ ಮೂವತ್ತಮೂರಕ್ಕೂ ಹೆಚ್ಚು ಸ್ಥಾನ ಗಳಿಸುವ ಮೂಲಕ ಬಿಜೆಪಿ ವಿಜಯದ ನಗೆ ಬೀರಿದೆ. ಆ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ಉಳಿದಂತೆ ಐದು ವಾರ್ಡ್ಗಳಲ್ಲಿ ಕಾಂಗ್ರೆಸ್, ಎರಡು ವಾರ್ಡ್ಗಳಲ್ಲಿ ಎಂಇಎಸ್, ಒಂದು ವಾರ್ಡ್ನಲ್ಲಿ ಎಐಎಂಐಎಂ ಜಯಗಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.