ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಇಂದಿನಿಂದ 6 – 8 ನೇ ತರಗತಿಗಳು ಆರಂಭವಾಗಿದ್ದು, ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಶಾಲಾರಂಭ ಮಾಡಲಾಗಿದೆ.
ತಜ್ಞರ ಸಲಹೆಯನ್ನು ಪಡೆದು ಎರಡನೇ ಹಂತದಲ್ಲಿ ಆರನೇ ತರಗತಿಯಿಂದ ಶಾಲಾರಂಭ ಮಾಡಲಾಗಿದ್ದು, 50% ರಷ್ಟು ವಿದ್ಯಾರ್ಥಿಗಳ ಹಾಜರಾತಿ ಯಲ್ಲಿ ವಿಭಾಗಗಳನ್ನು ಮಾಡಿ ಶಾಲೆಗಳನ್ನು ಆರಂಭಿಸಲಾಗಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕೊರೋನಾ ಹರಡದಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
ವಿದ್ಯಾರ್ಥಿಗಳು ಕಟ್ಟುನಿಟ್ಟಾಗಿ ಕೊರೋನಾ ಮಾರ್ಗಸೂಚಿಗಳಾದ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಹಾಕಿಸಿಕೊಂಡು ಶಾಲೆಗೆ ಬರುವಂತೆ ಸೂಚಿಸಲಾಗಿದೆ. ಹಾಗೆಯೇ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆಯೂ ಸೂಚಿಸಲಾಗಿದೆ. ಶಿಕ್ಷಕರು ಸಹ ಸರ್ಕಾರದ ಎಲ್ಲಾ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ತರಗತಿಗಳನ್ನು ನಡೆಸುವಂತೆ ಸೂಚಿಸಲಾಗಿದೆ.
ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಅವರು ಈ ಕುರಿತು ಟ್ವೀಟ್ ಮಾಡಿದ್ದು, ಇಂದಿನಿಂದ 6, 7 ಮತ್ತು 8 ನೇ ತರಗತಿಗಳ ಭೌತಿಕ ತರಗತಿಗಳು ಆರಂಭ ಹಿನ್ನೆಲೆಯಲ್ಲಿ ಬೆಂಗಳೂರಿನ ಜೆ.ಬಿ ನಗರದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹೂ ನೀಡಿ ಶಾಲೆಗೆ ಸ್ವಾಗತಿಸಲಾಯಿತು. ವಿದ್ಯಾರ್ಥಿಗಳೊಂದಿಗೆ ಮಾತನಾಡಿದೆ. ತರಗತಿಗಳ ಆರಂಭಕ್ಕೆ ಮಕ್ಕಳು ಸಂತಸ ವ್ಯಕ್ತಪಡಿಸಿದ್ದಾರೆʼ ಎಂದಿದ್ದಾರೆ.
ಇಂದಿನಿಂದ 6, 7 ಮತ್ತು 8 ನೇ ತರಗತಿಗಳ ಭೌತಿಕ ತರಗತಿಗಳು ಆರಂಭ ಹಿನ್ನೆಲೆಯಲ್ಲಿ ಬೆಂಗಳೂರಿನ ಜೆ.ಬಿ ನಗರದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹೂ ನೀಡಿ ಶಾಲೆಗೆ ಸ್ವಾಗತಿಸಲಾಯಿತು.
ವಿದ್ಯಾರ್ಥಿಗಳೊಂದಿಗೆ ಮಾತನಾಡಿದೆ. ತರಗತಿಗಳ ಆರಂಭಕ್ಕೆ ಮಕ್ಕಳು ಸಂತಸ ವ್ಯಕ್ತಪಡಿಸಿದ್ದಾರೆ.#ಮರಳಿಶಾಲೆಗೆ pic.twitter.com/P4u4FTe4Am
— B.C Nagesh (@BCNagesh_bjp) September 6, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.