ನವದೆಹಲಿ: ಇನ್ನಷ್ಟೇ ಉದ್ಯೋಗ ಪಡೆಯಬೇಕಾಗಿರುವ ಪದವಿ ಮತ್ತು ಡಿಪ್ಲೊಮಾ ಎಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗ ಕೌಶಲ್ಯ ತರಬೇತಿ ನೀಡುವ ಸಲುವಾಗಿ ಪೂರ್ವ ವಲಯದ ಪ್ರಾಕ್ಟಿಕಲ್ ಟ್ರೈನಿಂಗ್ ಬೋರ್ಡ್ಗೆ ಎಲ್ಲ ರೀತಿಯ ಬೆಂಬಲವನ್ನು ನೀಡಲು ಕೇಂದ್ರವು ಬದ್ಧವಾಗಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವರ್ಷದಲ್ಲಿ ಇಂತಹ ತರಬೇತಿ ಕಾರ್ಯಕ್ರಮಗಳಿಗಾಗಿ ಶಿಕ್ಷಣ ಸಚಿವಾಲಯವು ರೂ. 30 ಕೋಟಿಗೂ ಹೆಚ್ಚಿನ ಹಣಕಾಸಿನ ನೆರವನ್ನು ಒದಗಿಸಿದೆ ಎಂದು ಅವರು ಹೇಳಿದ್ದಾರೆ.
“ನ್ಯಾಷನಲ್ ಅಪ್ರೆಂಟಿಸ್ಶಿಪ್ ಟ್ರೈನಿಂಗ್ ಸ್ಕೀಮ್ (ಎನ್ಎಟಿಎಸ್) ಅಡಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಬಿಒಪಿಟಿ (ಇಆರ್) ಯ ಪ್ರಯತ್ನವನ್ನು ನಾನು ಶ್ಲಾಘಿಸುತ್ತೇನೆ” ಎಂದು ಶಿಕ್ಷಣ ಸಚಿವಾಲಯದ ಅಧೀನ ಕಾರ್ಯದರ್ಶಿ ಅಚಿಂತ್ ಕುಮಾರ್ ಹೇಳಿದ್ದಾರೆ.
BOPT (ER) ನ ನಿರ್ದೇಶಕರಾದ ಎಸ್.ಎಂ ಎಜಾಜ್ ಅಹ್ಮದ್ ಅವರು, “ವಿವಿಧ ಸಂಸ್ಥೆಗಳಿಂದ ಒಟ್ಟು 47,520 ಹೊಸ ಪದವೀಧರ ಎಂಜಿನಿಯರ್ಗಳು, ತಂತ್ರಜ್ಞರು ಮತ್ತು ಡಿಪ್ಲೊಮಾ ಹೊಂದಿರುವವರು ಈಗಾಗಲೇ 2021 ರಲ್ಲಿ ಅಪ್ರೆಂಟಿಸ್ಶಿಪ್ ತರಬೇತಿಗಾಗಿ ದಾಖಲಾಗಿದ್ದಾರೆ, 14,189 ವಿದ್ಯಾರ್ಥಿಗಳು ಪಶ್ಚಿಮ ಬಂಗಾಳದಿಂದ ನೋಂದಾಯಿಸಿಕೊಂಡಿದ್ದಾರೆ” ಎಂದಿದ್ದಾರೆ.
“ಪ್ರಸ್ತುತ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ, ಉದ್ಯೋಗ ನಷ್ಟವು ಉದ್ಯೋಗ ಗಳಿಕೆಗಿಂತ ಹೆಚ್ಚಾಗಿದೆ. ಇದು ತಾಂತ್ರಿಕ ಪದವೀಧರರಿಗೆ ಕಳವಳಕಾರಿ ವಿಷಯವಾಗಿದೆ” ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.