ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾಗಳ ನಡುವಿನ ದ್ವಿಪಕ್ಷೀಯ ರಕ್ಷಣಾ ಬಾಂಧವ್ಯವನ್ನು ಹೆಚ್ಚು ಬಲಪಡಿಸುವ ಉದ್ದೇಶದಿಂದ, ಜೊತೆಗೆ ಕಡಲ ಭದ್ರತೆಗೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೆಗೆ ಪೂರಕವಾಗುವಂತೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಉಭಯ ದೇಶಗಳೂ ಸಿದ್ಧತೆ ನಡೆಸುತ್ತಿವೆ.
ಮುಂದಿನ ವಾರ ಉಭಯ ದೇಶಗಳ ರಕ್ಷಣಾ ಮತ್ತು ವಿದೇಶಾಂಗ ಸಚಿವಾಲಯಗಳು ಈ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಮೊದಲ 2 +2 ಸ್ವರೂಪದ ಮಾತುಕತೆಗಳನ್ನು ನಡೆಸಲಿವೆ. ಸೆ. 10 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಆಸ್ಟ್ರೇಲಿಯಾದ ಪೀಟರ್ ಡಟನ್ ಅವರು ನವದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ.
ಆ ಬಳಿಕ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಿ ಉಭಯ ದೇಶಗಳ ರಕ್ಷಣಾ ಸಂಬಂಧ, ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಪೂರಕವಾದ ಮಾತುಕತೆಗಳನ್ನು ನಡೆಸಲಿದ್ದಾರೆ. ಹಾಗೆಯೇ ಆ ಬಳಿಕ ಆಸ್ಟ್ರೇಲಿಯಾದ ಮರಿಸ್ ಪೇನ್ ಅವರೂ ಸಹ ಜೈಶಂಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ಈಗಾಗಲೇ ಭಾರತ ಮತ್ತು ಆಸ್ಟ್ರೇಲಿಯಾಗಳು ತಮ್ಮ ಸಂಬಂಧವನ್ನು ಕಳೆದ ಬಾರಿ ‘ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ’ ಮಟ್ಟಕ್ಕೆ ಮೇಲ್ದರ್ಜೆಗೇರಿಸಿತ್ತು. ಈಗಾಗಲೇ ಉಭಯ ದೇಶಗಳು ಡಾರ್ವಿನ್ನಿಂದ ನೌಕಾ ಸಮರಾಭ್ಯಾಸದ ನಾಲ್ಕನೇ ಆವೃತ್ತಿಯನ್ನು ಸಹ ಆರಂಭಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.